ನಿಮ್ಮ WhatsApp ಚಾಟ್‌ಗಳನ್ನು ಬೇರೆಯವರು ಓದುತ್ತಿದ್ದರೆ ಪತ್ತೆ ಹಚ್ಚುವುದು ಹೇಗೆ?

Updated on 14-Jan-2022
HIGHLIGHTS

ವಾಟ್ಸಾಪ್ (WhatsApp)​​ ಖಾತೆಯನ್ನು ಇತರೆ ಡಿವೈಸ್‌ಗಳಲ್ಲಿ ಬಳಕೆ ಮಾಡಬಹುದಾಗಿದೆ

ಇದೊಂದು ಅನುಕೂಲಕರ ಫೀಚರ್ ಆಗಿದ್ದರೂ ಕೆಲವೊಮ್ಮೆ ಸಮಸ್ಯೆ ಎನಿಸಬಹುದು.

ಹ್ಯಾಕ್ ಆದ ವಾಟ್ಸಾಪ್​​ ಕೆಲವೊಮ್ಮೆ ದುರುಪಯೋಗ ಕೂಡಾ ಆಗಬಹುದು.

ವಾಟ್ಸಾಪ್ (WhatsApp)​​ ಖಾತೆಯನ್ನು ಇತರೆ ಡಿವೈಸ್‌ಗಳಲ್ಲಿ ಬಳಕೆ ಮಾಡಬಹುದಾಗಿದೆ. ಇದೊಂದು ಅನುಕೂಲಕರ ಫೀಚರ್ ಆಗಿದ್ದರೂ ಕೆಲವೊಮ್ಮೆ ಸಮಸ್ಯೆ ಎನಿಸಬಹುದು. ಕಂಪ್ಯೂಟರ್​ಗಳಲ್ಲಿಯೂ ಈಗೀಗ ವಾಟ್ಸಾಪ್ ಬಳಸುತ್ತಿರುವವರ ಸಂಖ್ಯೆ ಹೆಚ್ಚಿದೆ. ಹೀಗಾಗಿ ನಮ್ಮ ಖಾತೆ ಎಲ್ಲಿ ಲಾಗಿನ್ ಆಗಿರುತ್ತದೆ ಎಂಬುದು ಅರಿವಿಗೆ ಬರುವುದಿಲ್ಲ. ಹಾಗಾದ್ರೆ ನಿಮ್ಮ ವಾಟ್ಸಾಪ್​​ ಬೇರೆಯವರು ವೀಕ್ಷಿಸುತ್ತಿದ್ದಾರೆಯೇ ಎಂಬುದನ್ನು ತಿಳಿದುಕೊಳ್ಳುವುದು ಹೇಗೆ? ಕೆಲವೊಮ್ಮೆ ಬಳಕೆದಾರರ ತಪ್ಪಿನಿಂದಲೇ ಬೇರೆಯವರು ಅವರ ವಾಟ್ಸಾಪ್​​ ಚಾಟ್‌/ ಮೀಡಿಯಾ ಫೈಲ್ಸ್‌ ವೀಕ್ಷಿಸುತ್ತಾರೆ. 

ಅಂದರೆ ಬಳಕೆದಾರರ ತಪ್ಪಿನಿಂದಲೇ ಅವರ ವಾಟ್ಸಾಪ್​​ ಹ್ಯಾಕ್ ಆಗುವ ಚಾನ್ಸ್‌ ಇರುತ್ತವೆ. ಹೀಗೆ ಹ್ಯಾಕ್ ಆದ ವಾಟ್ಸಾಪ್​​ ಕೆಲವೊಮ್ಮೆ ದುರುಪಯೋಗ ಕೂಡಾ ಆಗಬಹುದು. ಹೀಗಾಗಿ ಬಳಕೆದಾರರ ವಾಟ್ಸಾಪ್​​ ಚಾಟ್ ಅನ್ನು ಯಾರಾದರೂ ರಹಸ್ಯವಾಗಿ ಓದುತ್ತಿದ್ದಾರೆಯೇ/ ವೀಕ್ಷಿಸುತ್ತಿದ್ದಾರೆಯೇ ಎನ್ನುವುದನ್ನು ತಿಳಿಯುವುದು ಮುಖ್ಯ. ಬಳಕೆದಾರರ ವಾಟ್ಸಾಪ್​​ ಚಾಟ್ ಅನ್ನು ಯಾರಾದರೂ ರಹಸ್ಯವಾಗಿ ಓದುತ್ತಿದ್ದಾರೆಯೇ/ ವೀಕ್ಷಿಸುತ್ತಿದ್ದಾರೆಯೇ ಎನ್ನುವುದನ್ನು ತಿಳಿಯಲು ಯಾವುದೇ ಥರ್ಡ್‌ಪಾರ್ಟಿ ಆಪ್‌ ಅಗತ್ಯ ಇಲ್ಲ. ಬದಲಿಗೆ ಬಳಕೆದಾರರು ಅವರ ವಾಟ್ಸ್​ಆ್ಯಪ್​​ನಲ್ಲಿಯೇ ಈ ಮಾಹಿತಿಯನ್ನು ತಿಳಿದುಕೊಳ್ಳಬಹುದು.

1.ಮೊದಲಿಗೆ ನಿಮ್ಮ ವಾಟ್ಸ್​ಆ್ಯಪ್​​ ಅಪ್ಲಿಕೇಶನ್ ಅನ್ನು ತೆರೆಯಿರಿ

2.ನಂತರ ಬಲ ಭಾಗದಲ್ಲಿ ಕಾಣಿಸುವ ಮೂರು ಡಾಟ್‌ ಸೆಲೆಕ್ಟ್ ಮಾಡಿರಿ

3.ಬಳಿಕ ಅಲ್ಲಿ ಕಾಣುಸಿವ ವಾಟ್ಸ್​ಆ್ಯಪ್​​ ವೆಬ್ / ಲಿಂಕ್‌ ಡಿವೈಸ್‌ ಆಯ್ಕೆಯ ಮೇಲೆ ಕ್ಲಿಕ್ ಮಾಡಿ

4.ನೀವು ಲ್ಯಾಪ್‌ಟಾಪ್ ಅಥವಾ ಡೆಸ್ಕ್‌ಟಾಪ್‌ನಲ್ಲಿ ವಾಟ್ಸ್​ಆ್ಯಪ್​​ ತೆರೆಯದಿದ್ದರೂ ಲಿಂಕ್ ಆಗಿದೆ ಎನ್ನುವುದನ್ನು ತೋರಿಸುತ್ತಿದ್ದರೆ ನಿಮ್ಮ ವಾಟ್ಸ್ಆ್ಯಪ್​​ ಚಾಟ್ ಅನ್ನು ಬೇರೆಯವರು ಓದುತ್ತಿದ್ದಾರೆ ಎಂದರ್ಥ.

ವಾಟ್ಸಾಪ್ ಬಾರ್‌ಕೋಡ್‌ ಸ್ಕ್ಯಾನ್‌

ಕೆಲವರಿಗೆ ಬೇರೆಯವರ ವಾಟ್ಸ್​ಆ್ಯಪ್​​ ಇಣುಕಿ ನೋಡುವ ಕುತೂಹಲ ಇರುತ್ತದೆ. ಅಂತಹವರು ಇತರರ ವಾಟ್ಸ್​ಆ್ಯಪ್​​ ಮೆಸೆಜ್ ಓದಲು ಕಳ್ಳ ಮಾರ್ಗ ಹುಡುಕುತ್ತಾರೆ. ಬಾರ್‌ಕೋಡ್‌ ಸ್ಕ್ಯಾನ್‌ ಮೂಲಕ ವಾಟ್ಸ್​ಆ್ಯಪ್​​ ಲ್ಯಾಪ್‌ಟಾಪ್‌ಗೆ ಅಥವಾ ಇತರೆ ಡಿವೈಸ್‌ನಲ್ಲಿ ನಕಲು ಮಾಡುವ ಸಾಧ್ಯತೆಗಳಿರುತ್ತವೆ. ಕೆಲವು ಬಳಕೆದಾರರು ತಮ್ಮ ಫೋನಿಗೆ ಯಾವುದೇ ಲಾಕ್‌ ಇಟ್ಟಿರುವುದಿಲ್ಲ. ಹಾಗೆಯೇ ವಾಟ್ಸ್​ಆ್ಯಪ್​​ ಆಪ್ ತೆರೆಯಲು ಸಹ ಯಾವುದೇ ಪಾಸ್‌ವರ್ಡ್‌ ಇಟ್ಟಿರುವುದಿಲ್ಲ. ಇಂತಹ ಖಾತೆಗಳಿಗೆ ಸುಲಭವಾಗಿ ಇತರರು ಹ್ಯಾಕ್ ಮಾಡಬಹುದಾಗಿದೆ. ಅವರ ವಾಟ್ಸ್​ಆ್ಯಪ್​​ ಖಾತೆ ತೆರೆದು ವಾಟ್ಸ್​ಆ್ಯಪ್​​ ವೆಬ್ / ಲಿಂಕ್‌ ಡಿವೈಸ್‌ ಬಾರ್‌ಕೋಡ್ ಸ್ಕ್ಯಾನ್ ಮೂಲಕ ಇನ್ನೊಂದು ಡಿವೈಸ್‌ನಲ್ಲಿ ನಕಲು ವಾಟ್ಸ್​ಆ್ಯಪ್​​ ತೆರೆದುಕೊಳ್ಳುವ ಚಾನ್ಸ್‌ ಇರುತ್ತವೆ.

ಹ್ಯಾಕ್ ತಡೆಯಲು ಏನು ಮಾಡಬೇಕು?

ವಾಟ್ಸ್​ಆ್ಯಪ್​​ ಹ್ಯಾಕ್ ಆಗುವುದನ್ನು ತಡೆಯಲು ಇತರೆ ಡಿವೈಸ್‌ಗಳಲ್ಲಿ ನೀವು ತೆರೆದಿರುವ ಎಲ್ಲಾ ಸೆಷನ್‌ಗಳಿಂದ ಲಾಗ್ ಔಟ್ ಮಾಡಬಹುದು. ಹೀಗೆ ಮಾಡಿದರೇ ಮೂರನೇ ವ್ಯಕ್ತಿಯು ನಿಮ್ಮ ಖಾತೆಗೆ ಪ್ರವೇಶವನ್ನು ತಕ್ಷಣ ಕಳೆದುಕೊಳ್ಳುತ್ತಾನೆ. ಈ ಸಂಗತಿಗಳು ಮತ್ತೆ ಸಂಭವಿಸುವುದನ್ನು ತಪ್ಪಿಸಲು ಅಪ್ಲಿಕೇಶನ್ ಲಾಕ್‌ನೊಂದಿಗೆ ವಾಟ್ಸ್​ಆ್ಯಪ್​​ ಅನ್ನು ಕಾನ್ಫಿಗರ್ ಮಾಡುವುದು ಅತ್ಯಂತ ಪರಿಣಾಮಕಾರಿ ಪರಿಹಾರವಾಗಿದೆ. ಈ ರೀತಿಯಾಗಿ, ಯಾರಾದರೂ ನಿಮ್ಮ ಫೋನ್ ಪಡೆದರೂ ಸಹ, ಅವರು ವಾಟ್ಸ್​ಆ್ಯಪ್​​ ಅಪ್ಲಿಕೇಶನ್ ಅನ್ನು ಪ್ರವೇಶಿಸಲು ಸಾಧ್ಯವಿಲ್ಲ ಮತ್ತು ಅದನ್ನು ವಾಟ್ಸ್​ಆ್ಯಪ್​​ ವೆಬ್ ಮೂಲಕ ಪಿಸಿ ಅಥವಾ ಇತರ ಅಪ್ಲಿಕೇಶನ್‌ಗೆ ಸಂಪರ್ಕಿಸಲು ಸಾಧ್ಯವಿಲ್ಲ.

Ravi Rao

Kannada Tech Editor: Ravi Rao is an Indian technology Journalist who has been covering day to day consumer Technology News, Features, How To and much more in Kannada since 2016.

Connect On :