ಪಡಿತರ ಚೀಟಿ ಅಂದ್ರೆ Ration Card ಅನ್ನು ಅನೇಕ ಸರ್ಕಾರಿ ಯೋಜನೆಗಳನ್ನು ತೆಗೆದುಕೊಳ್ಳಲು ಸಹ ಬಳಸಲಾಗುತ್ತದೆ. ಪಡಿತರ ಚೀಟಿಯಲ್ಲಿ ಕುಟುಂಬದ ಸದಸ್ಯರ ಹೆಸರು ಸೇರಿಸುವುದು ಅತಿ ಮುಖ್ಯವಾಗಿರೊದ್ರಿಂದ ಈ ಕೆಲಸ ಮಾಡಲೇಬೇಕಾದ ಅನಿವಾರ್ಯತೆ ಕೂಡ ಇರುತ್ತದೆ. ಅನೇಕ ಬಾರಿ ಕುಟುಂಬವು ದೊಡ್ಡದಾಗುತ್ತಿದ್ದಂತೆ ಅವರ ಮಕ್ಕಳ ಹೆಸರನ್ನು ಪಡಿತರ ಚೀಟಿಗೆ ಸೇರಿಸುವುದು ತುಂಬಾ ಕಷ್ಟಕರವಾಗುತ್ತದೆ. ಪಡಿತರ ಕಾರ್ಡ್‌ನಲ್ಲಿ ನೀವು ನಿಮ್ಮ ಕುಟುಂಬದ ಹೊಸ ಸದಸ್ಯರ ಹೆಸರನ್ನು ಹೇಗೆ ನಮೂದಿಸಬಹುದು ಎಂದು ನಾವು ನಿಮಗೆ ತಿಳಿಸುತ್ತೇವೆ.
ಕುಟುಂಬದಲ್ಲಿ ಒಂದು ಮಗು ಜನಿಸಿದರೆ ಆ ಮಗುವಿನ ಹೆಸರನ್ನು ಪಡಿತರ ಚೀಟಿಯಲ್ಲಿ ನೋಂದಾಯಿಸಿಕೊಳ್ಳಬೇಕಾದರೆ ಮೊದಲು ಮಗುವಿನ ಆಧಾರ್ ಕಾರ್ಡ್ (Aadhaar Card) ಅನ್ನು ಮಾಡಬೇಕಾಗುತ್ತದೆ. ಇದಕ್ಕಾಗಿ ಮಗುವಿನ ಜನನ ಪ್ರಮಾಣಪತ್ರದ ಅಗತ್ಯವಿದೆ. ಆದ್ದರಿಂದ ಮಗುವಿನ ಜನನ ಪ್ರಮಾಣಪತ್ರವನ್ನು ಸಮಯಕ್ಕೆ ಸರಿಯಾಗಿ ತೆಗೆದುಕೊಳ್ಳಬೇಕು ಎಂಬುದನ್ನು ನೆನಪಿನಲ್ಲಿಡಿ ಇಲ್ಲದಿದ್ದರೆ ಅದಕ್ಕೆ ಸಂಬಂಧಿಸಿದ ಬಹಳಷ್ಟು ಕೆಲಸಗಳು ಸ್ಥಗಿತಗೊಳ್ಳಬಹುದು.
ಮದುವೆಯ ನಂತರ ಹೊಸ ಸೊಸೆ ಮನೆಗೆ ಬಂದರೆ ಪಡಿತರ ಚೀಟಿಯಲ್ಲಿ (Ration Card) ಆಕೆಯ ಹೆಸರನ್ನು ಸೇರಿಸಲು ಮೊದಲನೆಯದಾಗಿ ಆಧಾರ್ ಕಾರ್ಡ್ ಅನ್ನು ಬದಲಾಯಿಸಬೇಕಾಗುತ್ತದೆ. ಇದಕ್ಕಾಗಿ ಮೊದಲು ಹುಡುಗಿ ತನ್ನ ಆಧಾರ್‌ನಲ್ಲಿ ತಂದೆಯ ಬದಲು ಗಂಡನ ಹೆಸರನ್ನು ನಮೂದಿಸಬೇಕಾಗುತ್ತದೆ ಮತ್ತು ವಿಳಾಸವನ್ನು ನವೀಕರಿಸಬೇಕು. ಅದರ ನಂತರ ಪರಿಷ್ಕೃತ ಆಧಾರ್ ಕಾರ್ಡ್‌ನ ಪ್ರತಿ ಜೊತೆಗೆ ಆಹಾರ ಸರಬರಾಜು ಅಧಿಕಾರಿಗೆ ಅರ್ಜಿಯನ್ನು ನೀಡಬೇಕಾಗುತ್ತದೆ.
1: ಅಧಿಕೃತ ವೆಬ್ ಸೈಟ್ ಗೆ ಲಾಗ್ ಇನ್ ಆಗುವುದು https://ahara.kar.nic.in/home.aspx
2: ಲಾಗ್‌ಇನ್ ಮಾಡಿದ ನಂತರ ಪುಟದಲ್ಲಿ ಇ-ಸೇವೆಯ ಆಯ್ಕೆಯಲ್ಲಿ ಇ-ಸ್ಥಿತಿಯಡಿ ತಿದ್ದುಪಡಿ ವಿನಂತಿಯನ್ನು ಕ್ಲಿಕ್ ಮಾಡಿ.
3: ನಿಮ್ಮ ಜಿಲ್ಲೆಯನ್ನು ಆಯ್ಕೆ ಮಾಡಿ ಫಾರ್ಮ್‌ನಲ್ಲಿ ಎಲ್ಲ ಅಗತ್ಯ ಮಾಹಿತಿಯನ್ನು ಭರ್ತಿ ಮಾಡಿಕೊಳ್ಳಿ.
4: ಆ ನಂತರ ತಿಳಿಸಲಾದ ಎಲ್ಲ ದಾಖಲೆಗಳನ್ನು ಸ್ಕ್ಯಾನ್ ಪ್ರತಿಯನ್ನು ಅಪಲೋಡ್ ಮಾಡುವುದು.
5: ಅಪ್‌ಲೋಡ್ ಮಾಡಿದ ನಂತರ ಫಾರ್ಮ್ ಅನ್ನು ಸಲ್ಲಿಸಬೇಕಾಗುತ್ತದೆ.
6: ಫಾರ್ಮ್ ಅನ್ನು ಸಲ್ಲಿಸಿದ ನಂತರ ನೋಂದಣಿ ಸಂಖ್ಯೆ ಸಿಗುತ್ತದೆ.
7: ನೋಂದಣಿ ಸಂಖ್ಯೆ ಮೂಲಕ ವೆಬ್ ಸೈಟ್ ಗೆ ಲಾಗ್‌ಇನ್ ಆಗಬಹುದು ಹಾಗೂ ಫಾರ್ಮ್ ಅನ್ನು ಟ್ರ್ಯಾಕ್ ಮಾಡಬಹುದು.
8: ನೀಡಲಾದ ಎಲ್ಲ ದಾಖಲಾತಿ ಸರಿಯಾಗಿದ್ದರೆ ಅಂಚೆ ಮೂಲಕ ಮನೆಗೆ ಪಡಿತರ ಚೀಟಿಯನ್ನೂ ಕಳಿಸಲಾಗುತ್ತದೆ.