ಕರ್ನಾಟಕದ ನಂತರ ಗೋವಾದಲ್ಲೂ ‘ದಿ ಕಾಶ್ಮೀರ್ ಫೈಲ್ಸ್’ ಸಿನಿಮಾವನ್ನು ತೆರಿಗೆ ಮುಕ್ತ ಎಂದು ಘೋಷಣೆ

ಕರ್ನಾಟಕದ ನಂತರ ಗೋವಾದಲ್ಲೂ ‘ದಿ ಕಾಶ್ಮೀರ್ ಫೈಲ್ಸ್’  ಸಿನಿಮಾವನ್ನು ತೆರಿಗೆ ಮುಕ್ತ ಎಂದು ಘೋಷಣೆ
HIGHLIGHTS

ಕರ್ನಾಟಕದ ಬಳಿಕ ಇದೀಗ ಗೋವಾದಲ್ಲಿಯೂ ‘ದಿ ಕಾಶ್ಮೀರ್ ಫೈಲ್ಸ್’ (The Kashmir Files) ಸಿನಿಮಾಗೆ ತೆರಿಗೆ ವಿನಾಯಿತಿ ಘೋಷಿಸಲಾಗಿದೆ.

ಈ ಸಿನಿಮಾಗೆ ಪ್ರೋತ್ಸಾಹ ನೀಡುವ ನಿಟ್ಟಿನಲ್ಲಿ ರಾಜ್ಯದಲ್ಲಿ ‘ದಿ ಕಾಶ್ಮೀರ್ ಫೈಲ್ಸ್’ ಸಿನಿಮಾಗೆ ತೆರಿಗೆ ವಿನಾಯಿತಿ ನೀಡಲಾಗುತ್ತಿದೆ

ಈಗಾಗಲೇ ಗಲ್ಲಾಪೆಟ್ಟಿಯಲ್ಲಿ ಸಖತ್ ಸದ್ದು ಮಾಡುತ್ತಿರುವ ಈ ಸಿನಿಮಾ ಬಾಲಿವುಡ್ ನಲ್ಲಿ ದಾಖಲೆ ಬರೆಯುತ್ತಿದೆ.

ಕರ್ನಾಟಕದ ಬಳಿಕ ಇದೀಗ ಗೋವಾದಲ್ಲಿಯೂ ‘ದಿ ಕಾಶ್ಮೀರ್ ಫೈಲ್ಸ್’ (The Kashmir Files) ಸಿನಿಮಾಗೆ ತೆರಿಗೆ ವಿನಾಯಿತಿ ಘೋಷಿಸಲಾಗಿದೆ. ಸೋಮವಾರ ‘ದಿ ಕಾಶ್ಮೀರ್ ಫೈಲ್ಸ್’ ಸಿನಿಮಾ ವೀಕ್ಷಿಸಿದ ಬಳಿಕ ಮಾತನಾಡಿದ ಗೋವಾ ಮಾಜಿ ಸಿಎಂ ಮತ್ತು ಬಿಜೆಪಿ ನಾಯಕ ಪ್ರಮೋದ್ ಸಾವಂತ್(Pramod Sawant) ಅವರು ತೆರಿಗೆ ವಿನಾಯಿತಿ ಘೋಷಿಸಿದ್ದಾರೆ. ಭಾನುವಾರವಷ್ಟೇ ಸಿನಿಮಾ ವೀಕ್ಷಿಸಿದ ಬಳಿಕ ಟ್ವೀಟ್ ಮಾಡಿದ್ದ ಕರ್ನಾಟಕ ಸಿಎಂ ಬಸವರಾಜ್ ಬೊಮ್ಮಾಯಿ(Basavaraj Bommai) ‘ಕಾಶ್ಮೀರಿ ಪಂಡಿತರು ತಮ್ಮ ನೆಲದಿಂದ ವಲಸೆ ಹೋಗುವಂತೆ ಮಾಡಿದ ಪರಿಸ್ಥಿತಿಯ ಕುರಿತ ಸಿನಿಮಾ ಮಾಡಿರುವ ವಿವೇಕ್ ಅಗ್ನಿಹೋತ್ರಿಗೆ ವಂದನೆಗಳು.

ಈ ಸಿನಿಮಾಗೆ ಪ್ರೋತ್ಸಾಹ ನೀಡುವ ನಿಟ್ಟಿನಲ್ಲಿ ರಾಜ್ಯದಲ್ಲಿ ‘ದಿ ಕಾಶ್ಮೀರ್ ಫೈಲ್ಸ್’ ಸಿನಿಮಾಗೆ ತೆರಿಗೆ ವಿನಾಯಿತಿ ನೀಡಲಾಗುತ್ತಿದೆ’ ಎಂದು ಹೇಳಿದ್ದರು. ಜಮ್ಮು-ಕಾಶ್ಮೀರ(Jammu and Kashmir)ದಲ್ಲಿ ಕಾಶ್ಮೀರಿ ಪಂಡಿತರ ವಿರುದ್ಧ ನಡೆದ ದೌರ್ಜನ್ಯಗಳ ಕರಾಳ ಮುಖವನ್ನು ಬಿಚ್ಚುಡುವ ‘ದಿ ಕಾಶ್ಮೀರ್ ಫೈಲ್ಸ್​​’ ಚಿತ್ರಕ್ಕೆ ದೇಶಾದ್ಯಂತ ಭಾರೀ ಮೆಚ್ಚುಗೆ ವ್ಯಕ್ತವಾಗಿದೆ. ಈ ಚಿತ್ರವನ್ನು ನಿರ್ದೇಶಿಸಿರುವ ವಿವೇಕ್ ಅಗ್ನಿಹೋತ್ರಿ(Vivek Agnihotri)ಗೆ ಪ್ರೇಕ್ಷಕ ಮಹಾಪ್ರಭು ಜೈ ಜೈ ಎಂದಿದ್ದಾರೆ.

ಈಗಾಗಲೇ ಗಲ್ಲಾಪೆಟ್ಟಿಯಲ್ಲಿ ಸಖತ್ ಸದ್ದು ಮಾಡುತ್ತಿರುವ ಈ ಸಿನಿಮಾ ಬಾಲಿವುಡ್ ನಲ್ಲಿ ದಾಖಲೆ ಬರೆಯುತ್ತಿದೆ. ಸ್ವತಃ ಪ್ರಧಾನಿ ಮೋದಿ(PM Modi) ಅವರೇ ಈ ಚಿತ್ರವನ್ನು ವೀಕ್ಷಿಸಿ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ. ಕಾಶ್ಮೀರಿ ಪಂಡಿತರ(Kashmiri Pandits) ಜೀವನ ಕಥನವು ಪ್ರೇಕ್ಷಕರಿಗೆ ಇಷ್ಟವಾಗಿದೆ. ಈ ನಿಟ್ಟಿನಲ್ಲಿ ಹೆಚ್ಚಿನ ಜನರು ಈ ಚಿತ್ರವನ್ನು ವೀಕ್ಷಿಸಿ ಕಾಶ್ಮೀರಿ ಪಂಡಿತರ ಬಗೆಗಿನ ಸಂತ್ಯಾಂಶವನ್ನು ತಿಳಿದುಕೊಳ್ಳಲಿ ಎಂದು ಮಧ್ಯಪ್ರದೇಶ, ಗುಜರಾತ್ ಮತ್ತು ಕರ್ನಾಟಕ ತೆರಿಗೆ ವಿನಾಯಿತಿ ಘೋಷಿಸಿದ್ದವು.

ಈಗ ಇದೇ ರಾಜ್ಯಗಳ ಹಾದಿಯಲ್ಲಿ ನಡೆದಿರುವ ಗೋವಾ ಕೂಡ ತೆರಿಗೆ ವಿನಾಯಿತಿ ಘೋಷಣೆ ಮಾಡಿದೆ. ನೈಜ ಘಟನೆಗಳ ಆಧಾರಿತ ‘ದಿ ಕಾಶ್ಮೀರ್ ಫೈಲ್ಸ್’ ಚಿತ್ರ(The Kashmir Files Film) ದಲ್ಲಿ ಹಿರಿಯ ನಟ ಅನುಪಮ್ ಖೇರ್, ಮಿಥುನ್ ಚಕ್ರವರ್ತಿ, ಪಲ್ಲವಿ ಜೋಶಿ, ದರ್ಶನ್ ಕುಮಾರ್ ಸೇರಿ ಅನೇಕ ದಿಗ್ಗಜ ನಟ-ನಟಿಯರು ನಟಿಸಿದ್ದಾರೆ. ಮಾರ್ಚ್ 11ರಂದು ತೆರೆಕಂಡಿದ್ದ ಈ ಸಿನಿಮಾ ಮೊದಲ ದಿನವೇ ಬರೋಬ್ಬರಿ 3.55 ಕೋಟಿ ರೂ. ಗಳಿಕೆ ಮಾಡಿತ್ತು.

Ravi Rao

Ravi Rao

Kannada Tech Editor: Ravi Rao is an Indian technology Journalist who has been covering day to day consumer Technology News, Features, How To and much more in Kannada since 2016. View Full Profile

Digit.in
Logo
Digit.in
Logo