OnePlus Nord CE 2 Lite 5G vs OnePlus Nord CE 3 Lite 5G ಯಾವುದು ಬೆಸ್ಟ್? ಬೆಲೆ ಮತ್ತು ಫೀಚರ್ಗಳೇನು?

OnePlus Nord CE 2 Lite 5G vs OnePlus Nord CE 3 Lite 5G ಯಾವುದು ಬೆಸ್ಟ್? ಬೆಲೆ ಮತ್ತು ಫೀಚರ್ಗಳೇನು?
HIGHLIGHTS

OnePlus Nord CE 2 Lite 5G ಮತ್ತು OnePlus Nord CE 3 Lite 5G ಸ್ಮಾರ್ಟ್ಫೋನ್ಗಳು ಆಕರ್ಷಕ ಫೀಚರ್ಸ್ಗಳಿಂದ ಗ್ರಾಹಕರನ್ನು ಸೆಳೆದಿದೆ.

OnePlus Nord CE 2 Lite 5G ಮತ್ತು OnePlus Nord CE 3 Lite 5G ಫೋನ್ಗಳನ್ನು ಇಂದು ನಾವು ಹೋಲಿಸು

OnePlus Nord CE 2 Lite 5G ಸ್ಮಾರ್ಟ್‌ಫೋನ್ 6.59 ಇಂಚಿನ ಫುಲ್ HD+ ಡಿಸ್‌ಪ್ಲೇಯನ್ನು ಹೊಂದಿದೆ.

OnePlus ಕಂಪನಿ ಭಾರತದಲ್ಲಿ ಪರಿಚಯಿಸಿರುವ OnePlus Nord CE 2 Lite 5G ಮತ್ತು OnePlus Nord CE 3 Lite 5G ಸ್ಮಾರ್ಟ್ಫೋನ್ಗಳು ಆಕರ್ಷಕ ಫೀಚರ್ಸ್ಗಳಿಂದ ಗ್ರಾಹಕರನ್ನು ಸೆಳೆದಿದೆ. ಈ ಸ್ಮಾರ್ಟ್ಫೋನ್ಗಳು ಇಂದಿನ ಅಗತ್ಯ ಫೀಚರ್ಸ್ಗಳ ಜೊತೆಗೆ ಆಕರ್ಷಕ ಲುಕ್ ಪಡೆದಿದೆ. ಮಾರುಕಟ್ಟೆಯಲ್ಲಿ ಮೀಡ್ರೇಂಜ್ ಸ್ಮಾರ್ಟ್ಫೋನ್ಗಳಾಗಿ ಆಗಿ ಕಾಣಿಸಿಕೊಂಡಿರುವ OnePlus Nord CE 2 Lite 5G ಮತ್ತು OnePlus Nord CE 3 Lite 5G ಫೋನ್ಗಳನ್ನು ಇಂದು ನಾವು ಹೋಲಿಸುತ್ತಿದ್ದೇವೆ. ಈ ಎರಡು ಫೋನ್ ಗಳ ಫೀಚರ್ಗಳೇನು ಇವುಗಳಲ್ಲಿ ಯಾವುದು ಬೆಸ್ಟ್ ನೋಡೋಣ.

OnePlus Nord CE 2 Lite 5G vs OnePlus Nord CE 3 Lite 5G ಡಿಸ್ಪ್ಲೇ

OnePlus Nord CE 2 Lite 5G ಸ್ಮಾರ್ಟ್‌ಫೋನ್ 6.59 ಇಂಚಿನ ಫುಲ್ HD+ ಡಿಸ್‌ಪ್ಲೇಯನ್ನು ಹೊಂದಿದೆ. ಇದು 1080 x 2412 ಪಿಕ್ಸೆಲ್‌ಗಳ ರೆಸಲ್ಯೂಶನ್ ಹಾಗೂ 120Hz ನ ರಿಫ್ರೆಶ್ ದರ ಮತ್ತು ಗೇಮಿಂಗ್‌ ಗಾಗಿ 240Hz ರೀಫ್ರೆಶ್ ದರವನ್ನು ಬೆಂಬಲಿಸುತ್ತದೆ. ಅಲ್ಲದೆ ಈ ಫೋನ್ 401 PPI ಡೆನ್ಸಿಟಿ ಅನ್ನು ಹೊಂದಿದೆ. ಡಿಸ್ಪ್ಲೇ ರಕ್ಷಣೆಗಾಗಿ ಇದು ಕಾರ್ನಿಂಗ್ ಗೊರಿಲ್ಲಾ ಗ್ಲಾಸ್ 5 ಅನ್ನು ಒಳಗೊಂಡಿದೆ. OnePlus Nord CE 3 Lite 5G ಸ್ಮಾರ್ಟ್ಫೋನ್ 6.72 ಇಂಚಿನ LCD ಡಿಸ್ಪ್ಲೇ ಹೊಂದಿದೆ. ಇದು 1080×2400 ಪಿಕ್ಸೆಲ್‌ಗಳ ರೆಸಲ್ಯೂಶನ್ ಹಾಗೂ 120Hz ನ ರಿಫ್ರೆಶ್ ದರವನ್ನು ಬೆಂಬಲಿಸುತ್ತದೆ. ಅಲ್ಲದೆ ಈ ಫೋನ್ 402 PPI ಡೆನ್ಸಿಟಿ ಅನ್ನು ಹೊಂದಿದೆ. ಡಿಸ್ಪ್ಲೇ ರಕ್ಷಣೆಗಾಗಿ ಇದು ಕಾರ್ನಿಂಗ್ ಗೊರಿಲ್ಲಾ ಗ್ಲಾಸ್ 5 ಅನ್ನು ಒಳಗೊಂಡಿದೆ.

OnePlus Nord CE 2 Lite 5G vs OnePlus Nord CE 3 Lite 5G ಕ್ಯಾಮೆರಾ

OnePlus Nord CE 2 Lite 5G ಸ್ಮಾರ್ಟ್ಫೋನ್ ಟ್ರಿಪಲ್ ರಿಯರ್ ಕ್ಯಾಮೆರಾ ಸೆಟಪ್ ಅನ್ನು ಹೊಂದಿದೆ. ಇದರಲ್ಲಿ ಮುಖ್ಯ ಕ್ಯಾಮೆರಾ 64MP ಸೆನ್ಸಾರ್ ಹೊಂದಿದೆ. ಎರಡನೇ ಕ್ಯಾಮೆರಾ 2MP ಸೆನ್ಸಾರ್ ಹೊಂದಿದ್ದು, ಮೂರನೇ ಕ್ಯಾಮೆರಾ 2MP ಮ್ಯಾಕ್ರೋ ಕ್ಯಾಮೆರಾವನ್ನು ಒಳಗೊಂಡಿದೆ. ಇನ್ನು ಸೆಲ್ಫಿಗಾಗಿ 16MP ಸೆನ್ಸಾರ್ ಕ್ಯಾಮೆರಾವನ್ನು ಹೊಂದಿದೆ. OnePlus Nord CE 3 Lite 5G ಸ್ಮಾರ್ಟ್ಫೋನ್ ಟ್ರಿಪಲ್ ರಿಯರ್ ಕ್ಯಾಮೆರಾ ಸೆಟ್ಅಪ್ ಅನ್ನು ಹೊಂದಿದೆ. ಇದರಲ್ಲಿ ಮುಖ್ಯ ಕ್ಯಾಮೆರಾ 108MP ಸ್ಯಾಮ್ಸಂಗ್ HM6 ಸೆನ್ಸಾರ್, ಎರಡನೇ ಕ್ಯಾಮೆರಾ 2MP ಮ್ಯಾಕ್ರೋ ಶೂಟರ್ ಮತ್ತು ಮೂರನೇ ಕ್ಯಾಮೆರಾ 2MP ಡೆಪ್ತ್ ಸೆನ್ಸಾರ್ ಅನ್ನು ಒಳಗೊಂಡಿದೆ. ಇನ್ನು ಸೆಲ್ಫಿಗಾಗಿ 16MP ಸೆನ್ಸಾರ್ ಕ್ಯಾಮೆರಾವನ್ನು ಹೊಂದಿದೆ.

OnePlus Nord CE 2 Lite 5G vs OnePlus Nord CE 3 Lite 5G ಪ್ರೊಸೆಸರ್

OnePlus Nord CE 2 Lite 5G ಸ್ಮಾರ್ಟ್ಫೋನ್ ಕ್ವಾಲ್ಕಮ್ ಸ್ನ್ಯಾಪ್ಡ್ರಾಗ್ನ್ 695 ಪ್ರೊಸೆಸರ್ ನಿಂದ ಚಾಲಿತವಾಗಿದೆ. ಇದಕ್ಕೆ ಪೂರಕವಾಗಿ ಆಕ್ಸಿಜೆನ್ 2.1 ಸ್ಕಿನ್ನೊಂದಿಗೆ ಆಂಡ್ರಾಯ್ಡ್ 12 OS ಕಾರ್ಯ ನಿರ್ವಹಿಸುತ್ತದೆ. ಹಾಗೆಯೇ 6GB RAM + 128GB ಮತ್ತು 8GB RAM + 128GB ಸ್ಟೋರೇಜ್ ವೇರಿಯಂಟ್ ನ ಆಯ್ಕೆಗಳನ್ನು ಹೊಂದಿದೆ. ಇದು ಅಧಿಕ ಡೇಟಾದ ಗೇಮಿಂಗ್ ಗೆ ಪೂರಕ ಆಗಿದೆ. OnePlus Nord CE 3 Lite 5G ಸ್ಮಾರ್ಟ್ಫೋನ್ ಆಕ್ಟಾ-ಕೋರ್ ಸ್ನಾಪ್ಡ್ರಾಗನ್ 695 ಪ್ರೊಸೆಸರ್ ನಿಂದ ಚಾಲಿತವಾಗಿದೆ. ಇದು ಆಂಡ್ರಾಯ್ಡ್ 13 ನಲ್ಲಿ ಆಕ್ಸಿಜನ್ OS 13.1 ಬೆಂಬಲದೊಂದಿಗೆ ಕಾರ್ಯನಿರ್ವಹಿಸುತ್ತದೆ. ಹಾಗೆಯೇ 8GB RAM ಮತ್ತು 256GB ಇಂಟರ್ನಲ್ ಸ್ಟೋರೇಜ್ ಅನ್ನು ಒಳಗೊಂಡಿದೆ. ಇದರೊಂದಿಗೆ RAM ಅನ್ನು ವಾಸ್ತವಿಕವಾಗಿ 8GB ವರೆಗೆ ವಿಸ್ತರಿಸಬಹುದು. ಅಲ್ಲದೆ ಮೆಮೊರಿ ಕಾರ್ಡ್ ಬೆಂಬಲದೊಂದಿಗೆ 1TB ವರೆಗೆ ಸ್ಟೋರೇಜ್ ಕೆಪ್ಯಾಸಿಟಿಯನ್ನು ಸಹ ವಿಸ್ತರಿಸಬಹುದು.

OnePlus Nord CE 2 Lite 5G vs OnePlus Nord CE 3 Lite 5G ಬ್ಯಾಟರಿ

OnePlus Nord CE 2 Lite 5G ಸ್ಮಾರ್ಟ್‌ಫೋನ್‌ 5,000mAh ಸಾಮರ್ಥ್ಯದ ಬ್ಯಾಟರಿಯನ್ನು ಹೊಂದಿದೆ. ಇದು ಯುಎಸ್‌ಬಿ ಟೈಪ್‌-ಸಿ ಮೂಲಕ 33W ಸೂಪರ್VOOC ಫಾಸ್ಟ್ ಚಾರ್ಜಿಂಗ್ ಅನ್ನು ಬೆಂಬಲಿಸುತ್ತದೆ. ಇನ್ನು ಕನೆಕ್ಟಿವಿಟಿ ಆಯ್ಕೆಗಳಲ್ಲಿ 5G, 4G LTE, ವೈಫೈ 6, ಬ್ಲೂಟೂತ್ 5.2, NFC, GPS ಮತ್ತು A-GPS ಸೇರಿವೆ. ಇದಲ್ಲದೆ ಅಕ್ಸಿಲೆರೊಮೀಟರ್, ಗೈರೊಸ್ಕೋಪ್, ಆಂಬಿಯೆಂಟ್ ಲೈಟ್ ಸೆನ್ಸರ್, ಪ್ರಾಕ್ಸಿಮಿಟಿ ಸೆನ್ಸಾರ್‌ ಅನ್ನು ಒಳಗೊಂಡಿದೆ. OnePlus Nord CE 3 Lite 5G ಸ್ಮಾರ್ಟ್‌ಫೋನ್‌ 5,000mAh ಸಾಮರ್ಥ್ಯದ ಬ್ಯಾಟರಿಯನ್ನು ಹೊಂದಿದೆ. ಇದು 67W ಸೂಪರ್ VOOC ವೈರ್ಡ್‌ ಚಾರ್ಜಿಂಗ್‌ ಅನ್ನು ಬೆಂಬಲಿಸುತ್ತದೆ. ಇನ್ನು ಕನೆಕ್ಟಿವಿಟಿ ಆಯ್ಕೆಗಳಲ್ಲಿ 5G, 4G LTE, Wi-Fi, 3.5mm ಆಡಿಯೋ ಜಾಕ್, ಬ್ಲೂಟೂತ್ 5.1, GPS/ A-GPS ಮತ್ತು USB ಟೈಪ್-ಸಿ ಪೋರ್ಟ್ ಅನ್ನು ಒಳಗೊಂಡಿದೆ. ಇದಲ್ಲದೆ ಅಕ್ಸಿಲೆರೊಮೀಟರ್, ಆಂಬಿಯೆಂಟ್‌ ಲೈಟ್‌, ಗೈರೊಸ್ಕೋಪ್ ಮತ್ತು ಪ್ರಾಕ್ಸಿಮಿಟಿ ಸೆನ್ಸಾರ್‌ ಅನ್ನು  ಬೆಂಬಲಿಸುತ್ತದೆ.

OnePlus Nord CE 2 Lite 5G vs OnePlus Nord CE 3 Lite 5G ಬೆಲೆ

OnePlus Nord CE 2 Lite 5G ಬ್ಲಾಕ್ ಮತ್ತು ಬ್ಲೂ ಕಲರ್ಗಳ ಆಯ್ಕೆಯಲ್ಲಿ ರೂ 18,999 ರ ಬೆಲೆಯಲ್ಲಿ ಆನ್ಲೈನ್ ಪ್ಲಾಟ್ ಫಾರ್ಮ್ ನಲ್ಲಿ ಲಭ್ಯವಿದೆ. OnePlus Nord CE 3 Lite 5G ಪಾಸ್ಟೆಲ್ ಲೈಮ್ ಮತ್ತು ಕ್ರೋಮ್ಯಾಟಿಕ್ ಗ್ರೇ  ಕಲರ್ಗಳ ಆಯ್ಕೆಯಲ್ಲಿ ರೂ 19,999 ರ ಬೆಲೆಯಲ್ಲಿ ಆನ್ಲೈನ್ ಪ್ಲಾಟ್ ಫಾರ್ಮ್ ನಲ್ಲಿ ಲಭ್ಯವಿದೆ.

Ravi Rao

Ravi Rao

Kannada Tech Editor: Ravi Rao is an Indian technology Journalist who has been covering day to day consumer Technology News, Features, How To and much more in Kannada since 2016. View Full Profile

Digit.in
Logo
Digit.in
Logo