Poco X4 Pro 5G vs Poco X5 Pro 5G ಟಾಪ್ 5 ಫೀಚರ್ ಹೋಲಿಕೆ! ಯಾವುದು ಬೆಸ್ಟ್ ನೀವೇ ಹೇಳಿ!

Updated on 04-Apr-2023
HIGHLIGHTS

Poco X4 Pro 5G ಮತ್ತು Poco X5 Pro 5G ಎರಡು ಫೋನ್ ಗಳ ಫೀಚರ್ಗಳೇನು ಇವುಗಳಲ್ಲಿ ಯಾವುದು ಬೆಸ್ಟ್

Poco ಕಂಪನಿಯ ಸ್ಮಾರ್ಟ್ಫೋನ್ಗಳು ಸ್ಟೈಲಿಶ್ ಲುಕ್ ಮತ್ತು ಆಕರ್ಷಕ ಫೀಚರ್ಗಳ ಮೂಲಕ ಭಾರಿ ಸಂಚಲನ ಸೃಷ್ಟಿಸಿದೆ

Poco X4 Pro 5G ಪೂರ್ಣ HD+ ರೆಸಲ್ಯೂಶನ್ನೊಂದಿಗೆ 6.67 ಇಂಚಿನ ಹೋಲ್-ಪಂಚ್ AMOLED ಡಿಸ್ಪ್ಲೇಯನ್ನು ಹೊಂದಿದೆ.

Poco X4 Pro 5G vs Poco X5 Pro 5G: ಪೊಕೋ ಕಂಪನಿ ತನ್ನ ವಿಭಿನ್ನ ಮಾದರಿಯ ಸ್ಮಾರ್ಟ್ಫೋನ್ಗಳಿಗೆ ಹೆಸರುವಾಸಿಯಾಗಿದ್ದು ಸ್ಟೈಲಿಶ್ ಲುಕ್ ಮತ್ತು ಆಕರ್ಷಕ ಫೀಚರ್ಗಳ ಮೂಲಕ ಭಾರಿ ಸಂಚಲನ ಸೃಷ್ಟಿಸಿದೆ. ಅತ್ಯುತ್ತಮ ಡಿಸೈನ್ಗಳ ಮೂಲಕ ಈಗಾಗಲೇ ಸೈ ಎನಿಸಿಕೊಂಡಿರುವ ಸ್ಮಾರ್ಟ್ಫೋನ್ ಗಳಾದ Poco X4 Pro 5G ಮತ್ತು Poco X5 Pro 5G ಫೋನ್ಗಳನ್ನು ಇಂದು ನಾವು ಹೋಲಿಸುತ್ತಿದ್ದೇವೆ. ಈ ಎರಡು ಫೋನ್ ಗಳ ಫೀಚರ್ಗಳೇನು ಇವುಗಳಲ್ಲಿ ಯಾವುದು ಬೆಸ್ಟ್ ನೋಡೋಣ.

Poco X4 Pro 5G vs Poco X5 Pro 5G ಡಿಸ್ಪ್ಲೇ

  • Poco X4 Pro 5G ಸ್ಮಾರ್ಟ್ಫೋನ್ ಪೂರ್ಣ HD+ ರೆಸಲ್ಯೂಶನ್ನೊಂದಿಗೆ 6.67-ಇಂಚಿನ ಹೋಲ್-ಪಂಚ್ AMOLED ಡಿಸ್ಪ್ಲೇಯನ್ನು ಹೊಂದಿದೆ. ಇದು 1080×2400 ಪಿಕ್ಸೆಲ್‌ಗಳ ರೆಸಲ್ಯೂಶನ್ ಹಾಗೂ 120Hz ನ ರಿಫ್ರೆಶ್ ದರ ಮತ್ತು 360Hz ನ ಟಚ್ ಮಾದರಿ ದರವನ್ನು ಬೆಂಬಲಿಸುತ್ತದೆ. ಅಲ್ಲದೆ ಈ ಫೋನ್ 395 PPI ಡೆನ್ಸಿಟಿ ಅನ್ನು ಹೊಂದಿದೆ. ಡಿಸ್ಪ್ಲೇ ರಕ್ಷಣೆಗಾಗಿ ಇದು ಕಾರ್ನಿಂಗ್ ಗೊರಿಲ್ಲಾ ಗ್ಲಾಸ್ 5 ಅನ್ನು ಒಳಗೊಂಡಿದೆ.
  • Poco X5 Pro 5G ಸ್ಮಾರ್ಟ್ಫೋನ್ 6.67 ಇಂಚಿನ ಎಕ್ಸ್ಫಿನಿಟಿ ಅಮೋಲೆಡ್ ಡಿಸ್ಪ್ಲೇಯನ್ನು ಹೊಂದಿದೆ. ಇದು 1080×2400 ಪಿಕ್ಸೆಲ್‌ಗಳ ರೆಸಲ್ಯೂಶನ್ ಹಾಗೂ 120Hz ಅಡಾಪ್ಟಿವ್ ರಿಫ್ರೆಶ್ ದರ 240Hz ಟಚ್ ಸ್ಯಾಂಪ್ಲಿಂಗ್ ದರ ಮತ್ತು HDR10+ ಅನ್ನು ಬೆಂಬಲಿಸುತ್ತದೆ. ಅಲ್ಲದೆ ಈ ಸ್ಮಾರ್ಟ್ಫೋನ್ ಸಹ 395 PPI ಡೆನ್ಸಿಟಿ ಅನ್ನು ಹೊಂದಿದ್ದು ಡಿಸ್ಪ್ಲೇ ರಕ್ಷಣೆಗಾಗಿ ಕಾರ್ನಿಂಗ್ ಗೊರಿಲ್ಲಾ ಗ್ಲಾಸ್ 5 ಅನ್ನು ಒಳಗೊಂಡಿದೆ.

Poco X4 Pro 5G vs Poco X5 Pro 5G ಕ್ಯಾಮೆರಾ

  • Poco X4 Pro 5G ಸ್ಮಾರ್ಟ್ಫೋನ್ ಟ್ರಿಪಲ್ ಕ್ಯಾಮೆರಾ ಸೆಟಪ್ ಅನ್ನು ಹೊಂದಿದೆ. 64-ಮೆಗಾಪಿಕ್ಸೆಲ್ ಮುಖ್ಯ ಕ್ಯಾಮೆರಾ, 8-ಮೆಗಾಪಿಕ್ಸೆಲ್ ಅಲ್ಟ್ರಾ-ವೈಡ್ ಆಂಗಲ್ ಕ್ಯಾಮೆರಾ ಮತ್ತು 2-ಮೆಗಾಪಿಕ್ಸೆಲ್ ಮ್ಯಾಕ್ರೋ ಕ್ಯಾಮೆರಾವನ್ನು ಈ ಫೋನ್ ಒಳಗೊಂಡಿದ್ದು ಸೆಲ್ಫಿಗಾಗಿ ಮುಂಭಾಗದಲ್ಲಿ 16 ಮೆಗಾಪಿಕ್ಸೆಲ್ ಕ್ಯಾಮೆರಾ ಇದೆ.
  • Poco X5 Pro 5G ಸ್ಮಾರ್ಟ್ಫೋನ್ ಟ್ರಿಪಲ್ ರಿಯರ್ ಕ್ಯಾಮೆರಾ ಸೆಟ್ಅಪ್ ಅನ್ನು ಹೊಂದಿದೆ. ಇದರಲ್ಲಿ ಮುಖ್ಯ ಕ್ಯಾಮೆರಾ 108-ಮೆಗಾಪಿಕ್ಸೆಲ್ ISOCELL HM2 ಸೆನ್ಸಾರ್ ಅನ್ನು ಹೊಂದಿದ್ದು ಎರಡನೇ ಕ್ಯಾಮೆರಾ 8-ಮೆಗಾಪಿಕ್ಸೆಲ್ ಅಲ್ಟ್ರಾ-ವೈಡ್ ಆಂಗಲ್ ಲೆನ್ಸ್ ಮತ್ತು ಮೂರನೇ ಕ್ಯಾಮೆರಾ 2-ಮೆಗಾಪಿಕ್ಸೆಲ್ ಮ್ಯಾಕ್ರೋ ಲೆನ್ಸ್ ಅನ್ನು ಹೊಂದಿದೆ. ಅಲ್ಲದೆ ಸೆಲ್ಫಿಗಾಗಿ 16-ಮೆಗಾಪಿಕ್ಸೆಲ್ ಕ್ಯಾಮೆರಾವನ್ನು ಒಳಗೊಂಡಿದೆ.

Poco X4 Pro 5G vs Poco X5 Pro 5G ಪ್ರೊಸೆಸರ್

  • Poco X4 Pro 5G ಕ್ವಾಲ್ಕಾಮ್ ಸ್ನಾಪ್ಡ್ರಾಗನ್ 695 ಪ್ರೊಸೆಸರ್ ಅನ್ನು ಹೊಂದಿದೆ. ಇದು 8GB ಯ RAM ನೊಂದಿಗೆ ಸಂಯೋಜಿಸಲ್ಪಟ್ಟಿದ್ದು MIUI 13 ನ ಬಾಕ್ಸ್ನ ಹೊರಗೆ Android 11 ನಲ್ಲಿ ರನ್ ಮಾಡುತ್ತದೆ. Poco X4 Pro 5G ವರ್ಚುವಲ್ RAM ಅನ್ನು 11GB ವರೆಗೆ ಪಡೆಯುತ್ತದೆ.
  • Poco X5 Pro 5G ಸ್ಮಾರ್ಟ್ಫೋನ್ ಕ್ವಾಲ್ಕಾಮ್ ಸ್ನಾಪ್ಡ್ರಾಗನ್ 778G ಪ್ರೊಸೆಸರ್ ಅನ್ನು ಹೊಂದಿದೆ. ಇದು ಆಂಡ್ರಾಯ್ಡ್ 12 ಆಧಾರಿತ MIUI 14 ಬೆಂಬಲದೊಂದಿಗೆ ಕಾರ್ಯನಿರ್ವಹಿಸುತ್ತದೆ. ಇನ್ನು ಈ ಸ್ಮಾರ್ಟ್ಫೋನ್ನಲ್ಲಿ 2 ವರ್ಷಗಳ ಆಂಡ್ರಾಯ್ಡ್ OS ಅಪ್ಡೇಟ್ ಮತ್ತು 3 ವರ್ಷಗಳ ಸೆಕ್ಯುರಿಟಿ ಪ್ಯಾಚ್ಗಳ ಭರವಸೆ ನೀಡಲಾಗಿದೆ. ಈ ಫೋನ್ 8GB RAM ಮತ್ತು 256GB ಇನ್ಬಿಲ್ಟ್ ಸ್ಟೋರೇಜ್ ಅನ್ನು ಹೊಂದಿದೆ.

Poco X4 Pro 5G vs Poco X5 Pro 5G ಬ್ಯಾಟರಿ

  • Poco X4 Pro 5G ಸ್ಮಾರ್ಟ್ಫೋನ್ 5,000mAh ಸಾಮರ್ಥ್ಯದ ಬ್ಯಾಟರಿಯನ್ನು ಹೊಂದಿದೆ. ಇದು 67W ಫಾಸ್ಟ್ ಚಾರ್ಜಿಂಗ್ ಬೆಂಬಲಿಸುತ್ತದೆ. ಇನ್ನು ಕನೆಕ್ಟಿವಿಟಿ ಆಯ್ಕೆಗಳಲ್ಲಿ 4G, 5G, ಬ್ಲೂಟೂತ್ 5.1, ವೈಫೈ, ಹಾಟ್ಸ್ಪಾಟ್, ಡ್ಯುಯಲ್ ಸ್ಪೀಕರ್, 3.5mm ಹೆಡ್ಫೋನ್ ಜ್ಯಾಕ್ ಅನ್ನು ಹೊಂದಿದೆ.
  • Poco X5 Pro 5G ಸ್ಮಾರ್ಟ್ಫೋನ್ 5,000mAh ಸಾಮರ್ಥ್ಯದ ಬ್ಯಾಟರಿಯನ್ನು ಹೊಂದಿದೆ. ಇದು 67W ಫಾಸ್ಟ್ ಚಾರ್ಜಿಂಗ್ ಮತ್ತು 5W ವೈರ್ಡ್ ರಿವರ್ಸ್ ಚಾರ್ಜಿಂಗ್ ಅನ್ನು ಬೆಂಬಲಿಸುತ್ತದೆ. ಇನ್ನು ಕನೆಕ್ಟಿವಿಟಿ ಆಯ್ಕೆಗಳಲ್ಲಿ ಯುಎಸ್ಬಿ ಟೈಪ್-ಸಿ ಪೋರ್ಟ್ ಮತ್ತು 3.5mm ಹೆಡ್ಫೋನ್ ಜ್ಯಾಕ್ ಅನ್ನು ಹೊಂದಿದೆ. ಇದಲ್ಲದೆ ಡ್ಯುಯಲ್-ಬ್ಯಾಂಡ್ Wi-Fi ಮತ್ತು ಬ್ಲೂಟೂತ್ 5.1 ವೈರ್ಲೆಸ್ ಸಂಪರ್ಕವನ್ನು ಬೆಂಬಲಿಸುತ್ತದೆ.

Poco X4 Pro 5G vs Poco X5 Pro 5G ಬೆಲೆ

Poco X4 Pro 5G ಬ್ಲಾಕ್, ಬ್ಲೂ ಮತ್ತು ಯಲ್ಲೋ ಕಲರ್‌ಗಳ ಆಯ್ಕೆಯಲ್ಲಿ ರೂ 18,999 ರ ಬೆಲೆಯಲ್ಲಿ ಆನ್ಲೈನ್ ಪ್ಲಾಟ್ ಫಾರ್ಮ್ ನಲ್ಲಿ ಲಭ್ಯವಿದೆ. Poco X5 Pro 5G ಆಸ್ಟ್ರಲ್ ಬ್ಲಾಕ್, ಹಾರಿಜಾನ್ ಬ್ಲೂ ಮತ್ತು ಪೊಕೊ ಯಲ್ಲೋ ಕಲರ್‌ಗಳ ಆಯ್ಕೆಯಲ್ಲಿ ರೂ 22,999 ರ ಬೆಲೆಯಲ್ಲಿ ಆನ್ಲೈನ್ ಪ್ಲಾಟ್ ಫಾರ್ಮ್ ನಲ್ಲಿ ಲಭ್ಯವಿದೆ.

Ravi Rao

Ravi Rao is an Indian technology journalist who has been covering consumer technology news and reviews since 2016. He is a Senior Editor for Kannada at Digit.in

Connect On :