POCO X5 Pro 5G vs Motorola G73 5G ಫೋನ್ಗಳಲ್ಲಿ ಯಾವುದು ಬೆಸ್ಟ್? ನೀವೇ ನೋಡಿ ಹೇಳಿ!

Updated on 06-Apr-2023
HIGHLIGHTS

POCO X5 Pro 5G ಮತ್ತು Motorola G73 5G ತನ್ನ ಆಕರ್ಷಕ ಡಿಸೈನ್‌ ಮೂಲಕವೇ ಗಮನ ಸೆಳೆದಿದೆ.

ಮೊಟೊರೊಲಾ ಪ್ಯೂರ್ ಸ್ಟಾಕ್ ಆಂಡ್ರಾಯ್ಡ್ ಮತ್ತು ಸ್ಟೈಲಿಶ್ ಲುಕ್ ಮೂಲಕವೆ ಹೆಸರುವಾಸಿಯಾಗಿದೆ.

POCO X5 Pro 5G ಮತ್ತು Motorola G73 5G ಫೋನ್ಗಳ ಫೀಚರ್‌ಗಳೇನು ಇವುಗಳಲ್ಲಿ ಯಾವುದು ಬೆಸ್ಟ್ ನೋಡೋಣ.

POCO X5 Pro 5G vs Motorola G73 5G: ಮೊಟೊರೊಲಾ ತನ್ನ ಸ್ಟೈಲಿಶ್‌ ಲುಕ್ನಿಂದಲೆ ಟೆಕ್ ಲೋಕದಲ್ಲಿ ಭಾರಿ ಸಂಚಲನ ಸೃಷ್ಟಿಸಿದ ಪೊಕೊ 5G ತನ್ನ ಆಕರ್ಷಕ ಡಿಸೈನ್‌ ಮೂಲಕವೇ ಗಮನ ಸೆಳೆದಿದೆ. ಈ ಸ್ಮಾರ್ಟ್‌ಫೋನ್‌ 108MP ಮೆಗಾಪಿಕ್ಸೆಲ್‌ ಕ್ಯಾಮೆರಾ ಒಳಗೊಂಡ ಟ್ರಿಪಲ್‌ ರಿಯರ್‌ ಕ್ಯಾಮೆರಾ ಸೆಟ್‌ಅಪ್‌ ಅನ್ನು ಹೊಂದಿದೆ. ಇದು ಮಿಡ್‌ ರೇಂಜರ್‌ ಆಕ್ಟಾ-ಕೋರ್‌ ಕ್ವಾಲ್ಕಾಮ್‌ ಸ್ನಾಪ್‌ಡ್ರಾಗನ್ 778G ಪ್ರೊಸೆಸರ್ ನಿಂದ ಕಾರ್ಯನಿರ್ವಹಿಸುತ್ತದೆ. ಮೊಟೊರೊಲಾ ಪ್ಯೂರ್ ಸ್ಟಾಕ್ ಆಂಡ್ರಾಯ್ಡ್ ಮತ್ತು ಸ್ಟೈಲಿಶ್ ಲುಕ್ ಮೂಲಕವೆ ಹೆಸರುವಾಸಿಯಾಗಿದೆ. ಈ ಫೋನ್ ಆಕ್ಟಾ-ಕೋರ್‌ ಮೀಡಿಯಾಟೆಕ್‌ ಡೈಮೆನ್ಸಿಟಿ 930 ಪ್ರೊಸೆಸರ್ ಅನ್ನು ಪಡೆದುಕೊಂಡಿದೆ.

POCO X5 Pro 5G vs Motorola G73 5G ಡಿಸ್ಪ್ಲೇ

Poco X5 Pro 5G ಸ್ಮಾರ್ಟ್ಫೋನ್ 6.67 ಇಂಚಿನ ಎಕ್ಸ್ಫಿನಿಟಿ ಅಮೋಲೆಡ್ ಡಿಸ್ಪ್ಲೇಯನ್ನು ಹೊಂದಿದೆ. ಇದು 1080×2400 ಪಿಕ್ಸೆಲ್‌ಗಳ ರೆಸಲ್ಯೂಶನ್ ಹಾಗೂ 120Hz ಅಡಾಪ್ಟಿವ್ ರಿಫ್ರೆಶ್ ದರ 240Hz ಟಚ್ ಸ್ಯಾಂಪ್ಲಿಂಗ್ ದರ ಮತ್ತು HDR10+ ಅನ್ನು ಬೆಂಬಲಿಸುತ್ತದೆ. ಅಲ್ಲದೆ ಈ ಸ್ಮಾರ್ಟ್ಫೋನ್ ಸಹ 395 PPI ಡೆನ್ಸಿಟಿ ಅನ್ನು ಹೊಂದಿದ್ದು ಡಿಸ್ಪ್ಲೇ ರಕ್ಷಣೆಗಾಗಿ ಕಾರ್ನಿಂಗ್ ಗೊರಿಲ್ಲಾ ಗ್ಲಾಸ್ 5 ಅನ್ನು ಒಳಗೊಂಡಿದೆ.

Motorola G73 5G ಸ್ಮಾರ್ಟ್ಫೋನ್ 6.5 ಇಂಚಿನ ಫುಲ್ HD+ ಡಿಸ್ಪ್ಲೇಯನ್ನು ಹೊಂದಿದೆ. ಇದು 1080×2400 ಪಿಕ್ಸೆಲ್‌ಗಳ ರೆಸಲ್ಯೂಶನ್ ಹಾಗೂ 120Hz ರಿಫ್ರೆಶ್ ದರವನ್ನು ಬೆಂಬಲಿಸುತ್ತದೆ. ಅಲ್ಲದೆ ಈ ಸ್ಮಾರ್ಟ್ಫೋನ್ ಸಹ 405 PPI ಡೆನ್ಸಿಟಿ ಅನ್ನು ಹೊಂದಿದ್ದು ಡಿಸ್ಪ್ಲೇ ರಕ್ಷಣೆಗಾಗಿ ಕಾರ್ನಿಂಗ್ ಗೊರಿಲ್ಲಾ ಗ್ಲಾಸ್ V5 ಅನ್ನು ಒಳಗೊಂಡಿದೆ.

POCO X5 Pro 5G vs Motorola G73 5G ಕ್ಯಾಮೆರಾ

Poco X5 Pro 5G ಸ್ಮಾರ್ಟ್ಫೋನ್ ಟ್ರಿಪಲ್ ರಿಯರ್ ಕ್ಯಾಮೆರಾ ಸೆಟ್ಅಪ್ ಅನ್ನು ಹೊಂದಿದೆ. ಇದರಲ್ಲಿ ಮುಖ್ಯ ಕ್ಯಾಮೆರಾ 108-ಮೆಗಾಪಿಕ್ಸೆಲ್ ISOCELL HM2 ಸೆನ್ಸಾರ್ ಅನ್ನು ಹೊಂದಿದ್ದು ಎರಡನೇ ಕ್ಯಾಮೆರಾ 8-ಮೆಗಾಪಿಕ್ಸೆಲ್ ಅಲ್ಟ್ರಾ-ವೈಡ್ ಆಂಗಲ್ ಲೆನ್ಸ್ ಮತ್ತು ಮೂರನೇ ಕ್ಯಾಮೆರಾ 2-ಮೆಗಾಪಿಕ್ಸೆಲ್ ಮ್ಯಾಕ್ರೋ ಲೆನ್ಸ್ ಅನ್ನು ಹೊಂದಿದೆ. ಅಲ್ಲದೆ ಸೆಲ್ಫಿಗಾಗಿ 16-ಮೆಗಾಪಿಕ್ಸೆಲ್ ಕ್ಯಾಮೆರಾವನ್ನು ಈ ಫೋನ್ ಒಳಗೊಂಡಿದೆ.

Motorola G73 5G ಸ್ಮಾರ್ಟ್‌ಫೋನ್‌ ಡ್ಯುಯಲ್ ರಿಯರ್ ಕ್ಯಾಮೆರಾ ಸೆಟ್‌ಅಪ್‌ ಅನ್ನು ಹೊಂದಿದೆ. ಇದರಲ್ಲಿ ಮುಖ್ಯ ಕ್ಯಾಮೆರಾ 50-ಮೆಗಾಪಿಕ್ಸೆಲ್ ಸೆನ್ಸಾರ್‌, ಎರಡನೇ ಕ್ಯಾಮೆರಾ 8-ಮೆಗಾಪಿಕ್ಸೆಲ್ ಅಲ್ಟ್ರಾ-ವೈಡ್ ಮ್ಯಾಕ್ರೋ ಡೆಪ್ತ್ ಶೂಟರ್ ಅನ್ನು ಹೊಂದಿದೆ. ಅಲ್ಲದೆ ಸೆಲ್ಫಿಗಾಗಿ 16-ಮೆಗಾಪಿಕ್ಸೆಲ್ ಕ್ಯಾಮೆರಾವನ್ನು ಈ ಫೋನ್ ಒಳಗೊಂಡಿದೆ.

POCO X5 Pro 5G vs Motorola G73 5G ಪ್ರೊಸೆಸರ್

Poco X5 Pro 5G ಸ್ಮಾರ್ಟ್ಫೋನ್ ಕ್ವಾಲ್ಕಾಮ್ ಸ್ನಾಪ್ಡ್ರಾಗನ್ 778G ಪ್ರೊಸೆಸರ್ ಅನ್ನು ಹೊಂದಿದೆ. ಇದು ಆಂಡ್ರಾಯ್ಡ್ 12 ಆಧಾರಿತ MIUI 14 ಬೆಂಬಲದೊಂದಿಗೆ ಕಾರ್ಯನಿರ್ವಹಿಸುತ್ತದೆ. ಇನ್ನು ಈ ಸ್ಮಾರ್ಟ್ಫೋನ್ನಲ್ಲಿ 2 ವರ್ಷಗಳ ಆಂಡ್ರಾಯ್ಡ್ OS ಅಪ್ಡೇಟ್ ಮತ್ತು 3 ವರ್ಷಗಳ ಸೆಕ್ಯುರಿಟಿ ಪ್ಯಾಚ್ಗಳ ಭರವಸೆ ನೀಡಲಾಗಿದೆ. ಈ ಫೋನ್ 8GB RAM ಮತ್ತು 256GB ಇನ್ಬಿಲ್ಟ್ ಸ್ಟೋರೇಜ್ ಅನ್ನು ಹೊಂದಿದೆ.

Motorola G73 5G ಸ್ಮಾರ್ಟ್‌ಫೋನ್‌ ಮೀಡಿಯಾಟೆಕ್‌ ಡೈಮೆನ್ಸಿಟಿ 930 ಪ್ರೊಸೆಸರ್ ಅನ್ನು ಹೊಂದಿದೆ. ಇದು ಆಂಡ್ರಾಯ್ಡ್ 13 ಬೆಂಬಲದೊಂದಿಗೆ ಕಾರ್ಯನಿರ್ವಹಿಸುತ್ತದೆ. ಅಲ್ಲದೆ ಆಂಡ್ರಾಯ್ಡ್ 14 ಗೆ ಅಪ್‌ಗ್ರೇಡ್ ಮಾಡಲು ಅವಕಾಶ ನೀಡುವುದಾಗಿ ಭರವಸೆ ನೀಡಲಾಗಿದೆ. ಹಾಗೆಯೇ 8GB RAM ಮತ್ತು 128GB ಇಂಟರ್ನಲ್ ಸ್ಟೋರೇಜ್‌ ಅನ್ನು ಒಳಗೊಂಡಿದೆ. ಇದಲ್ಲದೆ ಮೆಮೊರಿ ಕಾರ್ಡ್‌ ಬೆಂಬಲದೊಂದಿಗೆ 1TB ವರೆಗೆ ಸ್ಟೋರೇಜ್ ಕೆಪ್ಯಾಸಿಟಿಯನ್ನು ವಿಸ್ತರಿಸಬಹುದಾಗಿದೆ.

POCO X5 Pro 5G vs Motorola G73 5G ಬ್ಯಾಟರಿ

Poco X5 Pro 5G ಸ್ಮಾರ್ಟ್ಫೋನ್ 5,000mAh ಸಾಮರ್ಥ್ಯದ ಬ್ಯಾಟರಿಯನ್ನು ಹೊಂದಿದೆ. ಇದು 67W ಫಾಸ್ಟ್ ಚಾರ್ಜಿಂಗ್ ಮತ್ತು 5W ವೈರ್ಡ್ ರಿವರ್ಸ್ ಚಾರ್ಜಿಂಗ್ ಅನ್ನು ಬೆಂಬಲಿಸುತ್ತದೆ. ಇನ್ನು ಕನೆಕ್ಟಿವಿಟಿ ಆಯ್ಕೆಗಳಲ್ಲಿ USB ಟೈಪ್-C ಪೋರ್ಟ್ ಮತ್ತು 3.5mm ಹೆಡ್ಫೋನ್ ಜ್ಯಾಕ್ ಅನ್ನು ಹೊಂದಿದೆ. ಇದಲ್ಲದೆ ಡ್ಯುಯಲ್-ಬ್ಯಾಂಡ್ Wi-Fi ಮತ್ತು ಬ್ಲೂಟೂತ್ 5.1 ವೈರ್ಲೆಸ್ ಸಂಪರ್ಕವನ್ನು ಬೆಂಬಲಿಸುತ್ತದೆ.

Motorola G73 5G ಸ್ಮಾರ್ಟ್‌ಫೋನ್‌ 5,000mAh ಸಾಮರ್ಥ್ಯದ ಬ್ಯಾಟರಿಯನ್ನು ಹೊಂದಿದೆ. ಇದು 30W ಟರ್ಬೋಪವರ್ ಫಾಸ್ಟ್ ಚಾರ್ಜಿಂಗ್‌ ಅನ್ನು ಬೆಂಬಲಿಸುತ್ತದೆ. ಇನ್ನು ಕನೆಕ್ಟಿವಿಟಿ ಆಯ್ಕೆಗಳಲ್ಲಿ 5G, Wi-Fi 802.11a/b/g/n/ac, ಬ್ಲೂಟೂತ್ 5.3, FM ರೇಡಿಯೋ, GPS/ A-GPS, NFC, LTEPP, ಗ್ಲೋನಾಸ್, ಗೆಲಿಲಿಯೋ, USB ಟೈಪ್-C, ಮತ್ತು ಹೆಡ್‌ಫೋನ್ ಜ್ಯಾಕ್ ಅನ್ನು ಬೆಂಬಲಿಸುತ್ತದೆ.

POCO X5 Pro 5G vs Motorola G73 5G ಬೆಲೆ

Poco X5 Pro 5G ಆಸ್ಟ್ರಲ್ ಬ್ಲಾಕ್, ಹಾರಿಜಾನ್ ಬ್ಲೂ ಮತ್ತು ಪೊಕೊ ಯಲ್ಲೋ ಕಲರ್ಗಳ ಆಯ್ಕೆಯಲ್ಲಿ ರೂ 22,999 ರ ಬೆಲೆಯಲ್ಲಿ ಆನ್ಲೈನ್ ಪ್ಲಾಟ್ ಫಾರ್ಮ್ ನಲ್ಲಿ ಲಭ್ಯವಿದೆ.  Motorola G73 5G ಲ್ಯೂಸೆಂಟ್ ವೈಟ್ ಮತ್ತು ಮಿಡ್‌ನೈಟ್ ಬ್ಲೂ ಕಲರ್ಗಳ ಆಯ್ಕೆಯಲ್ಲಿ ರೂ 18,999 ರ ಬೆಲೆಯಲ್ಲಿ ಆನ್ಲೈನ್ ಪ್ಲಾಟ್ ಫಾರ್ಮ್ ನಲ್ಲಿ ಲಭ್ಯವಿದೆ.

Ravi Rao

Ravi Rao is an Indian technology journalist who has been covering consumer technology news and reviews since 2016. He is a Senior Editor for Kannada at Digit.in

Connect On :