Realme N55 vs Realme C55: ನಿಮಗೆ ತಿಳಿದಿರುವಂತೆ Realme ಬಜೆಟ್ ಸ್ನೇಹಿ ಸ್ಮಾರ್ಟ್ಫೋನ್ ಆಗಿದೆ. ಇದು ಮಿನಿ ಕ್ಯಾಪ್ಸುಲ್ ಫೀಚರ್ ಅನ್ನು ಹೊಂದಿದ್ದು ಇದು ಚಾರ್ಜ್ ನೋಟಿಫಿಕೇಶನ್, ಡೇಟಾ ಯೂಸೇಜ್ ನೋಟಿಫಿಕೇಶನ್ ಮತ್ತು ಸ್ಟೆಪ್ ನೋಟಿಫಿಕೇಶನ್ ನಂತಹ ಮೂರು ಅಗತ್ಯ ಫೀಚರ್‌ಗಳನ್ನು ನೀಡುತ್ತದೆ. ಈ ಸ್ಮಾರ್ಟ್ಫೋನ್ ಸೊಗಸಾದ ವಿನ್ಯಾಸವನ್ನು ಹೊಂದಿದ್ದು ಮೀಡಿಯಾಟೆಕ್ ಹಿಲಿಯೋ G88 ಪ್ರೊಸೆಸರ್ ನಿಂದ ಚಾಲಿತವಾಗಿದೆ. ಅಲ್ಲದೆ 5000mAh ಸಾಮರ್ಥ್ಯದ ಬ್ಯಾಟರಿ ಜೊತೆಗೆ 33W ಫಾಸ್ಟ್ ಚಾರ್ಜಿಂಗ್ ಅನ್ನು ಬೆಂಬಲಿಸುತ್ತದೆ. Realme N55 ಸ್ಮಾರ್ಟ್ಫೋನ್ ಇತ್ತೀಚೆಗೆ ಬಿಡುಗಡೆಯಾದ Realme C55 ನಿಂದ ಭಾರೀ ಸ್ಪರ್ಧೆಯನ್ನು ಎದುರಿಸಲಿದೆ.
Realme N55 ಸ್ಮಾರ್ಟ್ಫೋನ್ 6.72 ಇಂಚಿನ IPS LCD ಫುಲ್ ಹೆಚ್ಡಿ ಪ್ಲಸ್ ಡಿಸ್ಪ್ಲೇಯನ್ನು ಹೊಂದಿದೆ. ಈ ಡಿಸ್ಪ್ಲೇ 1080 x 2400 ಪಿಕ್ಸೆಲ್ ಸ್ಕ್ರೀನ್ ರೆಸಲ್ಯೂಶನ್ ಜೊತೆಗೆ 90Hz ರಿಫ್ರೆಶ್ ರೇಟ್ ಅನ್ನು ಒಳಗೊಂಡಿದ್ದು ಮಿನಿ ಕ್ಯಾಪ್ಸುಲ್ ಫೀಚರ್ಸ್ ಅನ್ನು ಹೊಂದಿದೆ. ಇದು ಡಿಸ್ಪ್ಲೇಯನ್ನು ಅಗತ್ಯಕ್ಕೆ ತಕ್ಕಂತೆ ಸೆಟ್ ಮಾಡಲು ಅವಕಾಶ ನೀಡುತ್ತದೆ. Realme C55 ಸ್ಮಾರ್ಟ್ಫೋನ್ 6.7 ಇಂಚಿನ ಫುಲ್ HD+ LCD ಡಿಸ್ಪ್ಲೇಯನ್ನು ಹೊಂದಿದೆ. ಈ ಡಿಸ್ಪ್ಲೇ 1080 x 2400 ಪಿಕ್ಸೆಲ್ ಸ್ಕ್ರೀನ್ ರೆಸಲ್ಯೂಶನ್ ಜೊತೆಗೆ 90Hz ರಿಫ್ರೆಶ್ ರೇಟ್ ಅನ್ನು ಒಳಗೊಂಡಿದೆ. ಇದು ಮೊದಲ C-ಸರಣಿ ಮಾದರಿ ಫೋನ್ ಆಗಿದ್ದು ಪಂಚ್ ಹೋಲ್ ನಾಚ್ ವಿನ್ಯಾಸವು ದೊಡ್ಡ ಡಿಸ್ಪ್ಲೇ ಹೊಂದಲು ಸಹಾಯಕವಾಗಿದೆ.
Realme N55 ಸ್ಮಾರ್ಟ್ಫೋನ್ ಡ್ಯುಯಲ್ ರಿಯರ್ ಕ್ಯಾಮೆರಾ ಸೆಟ್ಅಪ್ ಅನ್ನು ಹೊಂದಿದೆ. ಇದರಲ್ಲಿ ಮುಖ್ಯ ಕ್ಯಾಮೆರಾ 64 ಮೆಗಾಪಿಕ್ಸೆಲ್ ಸೆನ್ಸಾರ್ ಅನ್ನು ಹೊಂದಿದೆ. ಇನ್ನು ಎರಡನೇ ಕ್ಯಾಮೆರಾ 2 ಮೆಗಾಪಿಕ್ಸೆಲ್ ಡೆಪ್ತ್ ಸೆನ್ಸಾರ್ ಅನ್ನು ಒಳಗೊಂಡಿದೆ. ಹಾಗೆಯೇ 8 ಮೆಗಾಪಿಕ್ಸೆಲ್ ಸೆನ್ಸಾರ್ ಸಾಮರ್ಥ್ಯದ ಸೆಲ್ಫಿ ಕ್ಯಾಮೆರಾವನ್ನು ಈ ಫೋನ್ ಒಳಗೊಂಡಿದೆ. Realme C55 ಸ್ಮಾರ್ಟ್ಫೋನ್ ಡ್ಯುಯಲ್ ರಿಯರ್ ಕ್ಯಾಮೆರಾ ಸೆಟ್ಅಪ್ ಅನ್ನು ಹೊಂದಿದೆ. ಇದರಲ್ಲಿ 64 ಮೆಗಾಪಿಕ್ಸೆಲ್ ಮುಖ್ಯ ಕ್ಯಾಮೆರಾ ಮತ್ತು 2 ಮೆಗಾಪಿಕ್ಸೆಲ್ ಡೆಪ್ತ್ ಸೆನ್ಸಾರ್ ಆಯ್ಕೆನ್ನು ನೀಡಲಾಗಿದೆ. ಹಾಗೆಯೇ 8 ಮೆಗಾಪಿಕ್ಸೆಲ್ ಸೆನ್ಸಾರ್ ಸಾಮರ್ಥ್ಯದ ಸೆಲ್ಫಿ ಕ್ಯಾಮೆರಾವನ್ನು ಈ ಫೋನ್ ಒಳಗೊಂಡಿದೆ.
Realme N55 ಸ್ಮಾರ್ಟ್ಫೋನ್ ಮೀಡಿಯಾಟೆಕ್ ಹಿಲಿಯೋ G88 ಪ್ರೊಸೆಸರ್ ನಿಂದ ಕಾರ್ಯನಿರ್ವಹಿಸುತ್ತದೆ. ಇದು ಆಂಡ್ರಾಯ್ಡ್ 13 ಆಧಾರಿತ Realme UI ಔಟ್-ಆಫ್-ದಿ-ಬಾಕ್ಸ್ ನಲ್ಲಿ ರನ್ ಆಗಲಿದೆ. Realme C55 ಸ್ಮಾರ್ಟ್ಫೋನ್ ಮೀಡಿಯಾಟೆಕ್ ಹಿಲಿಯೋ G88 ಪ್ರೊಸೆಸರ್ ಮೂಲಕ ಕಾರ್ಯನಿರ್ವಹಿಸುತ್ತದೆ. ಇದು 13 ಆಧಾರಿತ Realme UI 4.0 ನಲ್ಲಿ ರನ್ ಆಗಲಿದೆ.
Realme N55 ಸ್ಮಾರ್ಟ್ಫೋನ್ 5000mAh ಸಾಮರ್ಥ್ಯದ ಬ್ಯಾಟರಿಯನ್ನು ಹೊಂದಿದೆ. ಹಾಗೆಯೇ 33W ಸೂಪರ್ವೂಕ್ ಫಾಸ್ಟ್ ಚಾರ್ಜಿಂಗ್ ಅನ್ನು ಬೆಂಬಲಿಸುತ್ತದೆ. ಇದರಿಂದ ಈ ಸ್ಮಾರ್ಟ್ಫೋನ್ ಅನ್ನು ಕೇವಲ 29 ನಿಮಿಷಗಳಲ್ಲಿ 0% ದಿಂದ 50%ವರೆಗೆ ಚಾರ್ಜ್ ಮಾಡಬಹುದು. Realme C55 ಸ್ಮಾರ್ಟ್ಫೋನ್ 5000mAh ಸಾಮರ್ಥ್ಯದ ಬ್ಯಾಟರಿಯನ್ನು ಹೊಂದಿದೆ. ಹಾಗೆಯೇ 33W ಫಾಸ್ಟ್ ಚಾರ್ಜಿಂಗ್ ಅನ್ನು ಇದು ಬೆಂಬಲಿಸುತ್ತದೆ. ಈ ಮೂಲಕ ಅತ್ಯಂತ ವೇಗವಾಗಿ ಮೊಬೈಲ್ ಚಾರ್ಜ್ ಆಗಲಿದೆ.
Realme N55 ಪ್ರೈಮ್ ಬ್ಲೂ ಮತ್ತು ಪ್ರೈಮ್ ಬ್ಲಾಕ್ ಕಲರ್‌ಗಳ ಆಯ್ಕೆಯಲ್ಲಿ ರೂ 10,999 ರ ಬೆಲೆಯಲ್ಲಿ ಆನ್ಲೈನ್ ಪ್ಲಾಟ್ ಫಾರ್ಮ್ ನಲ್ಲಿ ಲಭ್ಯವಿದೆ. Realme C55 ಸನ್-ಶವರ್ ಮತ್ತು ರೈನಿ ನೈಟ್ ಕಲರ್‌ಗಳ ಆಯ್ಕೆಯಲ್ಲಿ ರೂ 10,999 ರ ಬೆಲೆಯಲ್ಲಿ ಆನ್ಲೈನ್ ಪ್ಲಾಟ್ ಫಾರ್ಮ್ ನಲ್ಲಿ ಲಭ್ಯವಿದೆ.