Redmi Note 11 Pro+ vs Oppo A1 Pro: ಪ್ರಸ್ತುತ ಮಾರುಕಟ್ಟೆಯಲ್ಲಿ ಅನೇಕ ಬಜೆಟ್ ವಿಭಾಗದ ಸ್ಮಾರ್ಟ್‌ಫೋನ್‌ಗಳಿವೆ. ನಾವು ಇಲ್ಲಿ OPPO ಮತ್ತು Xiaomi ಕಂಪನಿಯ ಬಜೆಟ್ ಸ್ಮಾರ್ಟ್‌ಫೋನ್‌ಗಳ ಬಗ್ಗೆ ಮಾತನಾಡುತ್ತಿದ್ದೇವೆ. ಇಲ್ಲಿ OPPO A1 Pro ಮತ್ತು Redmi Note 11 Pro Plus 5G ಅನ್ನು ಹೋಲಿಕೆ ಮಾಡಲಾಗಿದೆ. OPPO A1 Pro ಅನ್ನು ಪ್ಲಾಸ್ಟಿಕ್‌ನಿಂದ ಮಾಡಲಾಗಿದೆ ಮತ್ತು ಮುಂಭಾಗದಲ್ಲಿ ವಾಟರ್‌ಡ್ರಾಪ್ ನಾಚ್ ಅನ್ನು ಈ ಫೋನ್ ಹೊಂದಿದೆ. ಎರಡೂ ಫೋನ್‌ಗಳ ಬದಿಯಲ್ಲಿ ಫಿಂಗರ್‌ಪ್ರಿಂಟ್ ಸ್ಕ್ಯಾನರ್ ಇದೆ. ಆದರೆ Xiaomi Redmi Note 11 Pro Plus 5G ಮೆಟಲ್ ನಿಂದ ಮಾಡಲ್ಪಟ್ಟಿದೆ ಮತ್ತು ಪಂಚ್-ಹೋಲ್ ಡಿಸ್ಪ್ಲೇಯನ್ನು ಹೊಂದಿದೆ. ಈ ಎರಡೂ ಫೋನ್‌ಗಳ ಬದಿಯಲ್ಲಿ ಫಿಂಗರ್‌ಪ್ರಿಂಟ್ ಸ್ಕ್ಯಾನರ್ ಇದೆ. ಇವೆರಡೂ ಮಧ್ಯಮ ಶ್ರೇಣಿಯ ಸ್ಮಾರ್ಟ್‌ಫೋನ್‌ಗಳಾಗಿವೆ. ಈ ಫೋನ್ ಗಳ ಫೀಚರ್‌ಗಳೇನು ಇವಗಳಲ್ಲಿ ಯಾವುದು ಬೆಸ್ಟ್ ನೋಡೋಣ
OPPO A1 Pro ಸ್ಮಾರ್ಟ್‌ಫೋನ್ 6.70-ಇಂಚಿನ ಫುಲ್ HD+ ಡಿಸ್‌ಪ್ಲೇಯನ್ನು ಹೊಂದಿದೆ. ಈ ಡಿಸ್‌ಪ್ಲೇ 1080 x 2412 ಪಿಕ್ಸೆಲ್ ಸ್ಕ್ರೀನ್ ರೆಸಲ್ಯೂಶನ್ ಸಾಮರ್ಥ್ಯದೊಂದಿಗೆ 120Hz ರಿಫ್ರೆಶ್ ದರದಿಂದ ಕೂಡಿದ್ದು ಆಪ್ಟಿಕಲ್ ಇನ್-ಡಿಸ್ಪ್ಲೇ ಫಿಂಗರ್‌ಪ್ರಿಂಟ್ ಸ್ಕ್ಯಾನರ್ ಅನ್ನು ಹೊಂದಿದೆ. ಮತ್ತೊಂಡೆ 6.67 ಇಂಚಿನ ಡಿಸ್‌ಪ್ಲೇಯನ್ನು ಹೊಂದಿದೆ. ಈ ಡಿಸ್‌ಪ್ಲೇ 1080 x 2400 ಪಿಕ್ಸೆಲ್ ಸ್ಕ್ರೀನ್ ರೆಸಲ್ಯೂಶನ್ ಸಾಮರ್ಥ್ಯದೊಂದಿಗೆ 120Hz ರಿಫ್ರೆಶ್ ದರದಿಂದ ಕೂಡಿದ್ದು ಡಿಸ್ಪ್ಲೇ ರಕ್ಷಣೆಗಾಗಿ ಇದು ಕಾರ್ನಿಂಗ್ ಗೊರಿಲ್ಲಾ ಗ್ಲಾಸ್ 5 ಅನ್ನು ಒಳಗೊಂಡಿದೆ.
OPPO A1 Pro ಪ್ರೊ ಸ್ಮಾರ್ಟ್‌ಫೋನ್ ಡ್ಯುಯಲ್-ರಿಯರ್ ಕ್ಯಾಮೆರಾ ಸೆಟಪ್ ಅನ್ನು ಹೊಂದಿದೆ. ಇದರ ಮುಖ್ಯ ಕ್ಯಾಮೆರಾ 108MP ಮೆಗಾಪಿಕ್ಸೆಲ್ ಸೆನ್ಸಾರ್ ಹೊಂದಿದ್ದು ಎರಡನೇ ಕ್ಯಾಮೆರಾ 2MP ಮೆಗಾಪಿಕ್ಸೆಲ್ ಪೋರ್ಟ್ರೇಟ್ ಸೆನ್ಸಾರ್ ಅನ್ನು ಒಳಗೊಂಡಿದೆ. ಅಲ್ಲದೆ ಇದು LED ಫ್ಲ್ಯಾಷ್ ಅನ್ನು ಸಹ ಹೊಂದಿದೆ. ಇದರ ಜೊತೆಗೆ ಸೆಲ್ಫಿಗಾಗಿ 16MP ಕ್ಯಾಮೆರಾವನ್ನು ನೀಡಲಾಗಿದೆ. ಮತ್ತೊಂಡೆ ಟ್ರಿಪಲ್ ಕ್ಯಾಮೆರಾ ಸೆಟಪ್ ಅನ್ನು ಹೊಂದಿದೆ. ಇದರ ಮುಖ್ಯ ಕ್ಯಾಮೆರಾ 108MP ಮೆಗಾಪಿಕ್ಸೆಲ್ ಸೆನ್ಸಾರ್ ಹೊಂದಿದು 8MP + 2MP ಹಿಂಬದಿಯ ಕ್ಯಾಮೆರಾವನ್ನು ಈ ಫೋನ್ ಒಳಗೊಂಡಿದೆ. ಇದರ ಜೊತೆಗೆ ಸೆಲ್ಫಿಗಾಗಿ 16 MP ಕ್ಯಾಮೆರಾವನ್ನು ನೀಡಲಾಗಿದೆ.
OPPO A1 Pro ಸ್ಮಾರ್ಟ್‌ಫೋನ್ ಆಕ್ಟಾ-ಕೋರ್ ಕ್ವಾಲ್ಕಾಮ್ ಸ್ನಾಪ್‌ಡ್ರಾಗನ್ 695 ಪ್ರೊಸೆಸರ್ ಅನ್ನು ಹೊಂದಿದೆ. ಇದು ಆಂಡ್ರಾಯ್ಡ್ 13 ಆಧಾರಿತವಾಗಿದೆ. ಈ ಫೋನ್ 12GB RAM ಮತ್ತು 256GB ಇಂಟರ್ನಲ್ ಸ್ಟೋರೇಜ್ ಅನ್ನು ಒಳಗೊಂಡಿದೆ. ಅಲ್ಲದೆ ಇದು 8GB ವರೆಗಿನ ವರ್ಚುವಲ್ RAM ಫೀಚರ್ಸ್ ಅನ್ನು ಸಹ ಬೆಂಬಲಿಸಲಿದೆ. Redmi Note 11 Pro Plus 5G ಸ್ಮಾರ್ಟ್‌ಫೋನ್ ಆಕ್ಟಾ-ಕೋರ್ ಕ್ವಾಲ್ಕಾಮ್ ಸ್ನಾಪ್‌ಡ್ರಾಗನ್ 695 ಪ್ರೊಸೆಸರ್ ಅನ್ನು ಹೊಂದಿದೆ. ಇದು ಆಂಡ್ರಾಯ್ಡ್ 11 ಆಧಾರಿತವಾಗಿದೆ. ಈ ಫೋನ್ 6GB RAM ಮತ್ತು 128GB ಇಂಟರ್ನಲ್ ಸ್ಟೋರೇಜ್ ಅನ್ನು ಹೊಂದಿದೆ.
OPPO A1 Pro ಸ್ಮಾರ್ಟ್‌ಫೋನ್ 4800mAh ಸಾಮರ್ಥ್ಯದ ಬ್ಯಾಟರಿಯನ್ನು ಒಳಗೊಂಡಿದೆ. ಇದು 67W ಸೂಪರ್ VOOC ಫಾಸ್ಟ್ ಚಾರ್ಜಿಂಗ್ ಬೆಂಬಲವನ್ನು ಹೊಂದಿದೆ. ಈ ಫೋನ್ ಚಾರ್ಜಿಂಗ್ ಮತ್ತು ಡೇಟಾ ವರ್ಗಾವಣೆಗಾಗಿ USB 2.0 ಟೈಪ್-ಸಿ ಪೋರ್ಟ್ ಅನ್ನು ಹೊಂದಿದೆ. Redmi Note 11 Pro Plus 5G ಸ್ಮಾರ್ಟ್‌ಫೋನ್ 4500mAh ಸಾಮರ್ಥ್ಯದ ಬ್ಯಾಟರಿಯನ್ನು ಒಳಗೊಂಡಿದೆ. ಇದು120W ಫಾಸ್ಟ್ ಚಾರ್ಜಿಂಗ್ ಬೆಂಬಲವನ್ನು ಹೊಂದಿದೆ. ಈ ಫೋನ್ ಕೇವಲ 15 ನಿಮಿಷಗಳಲ್ಲಿ ಸಂಪೂರ್ಣವಾಗಿ ಚಾರ್ಜ್ ಆಗುತ್ತದೆ.
OPPO A1 Pro ಸ್ಮಾರ್ಟ್‌ಫೋನ್ ಮೂನ್ಸೀ ಬ್ಲಾಕ್, ಡಾನ್ ಗೋಲ್ಡ್ ಮತ್ತು ಬ್ಲೂ ಕಲರ್‌ಗಳ ಆಯ್ಕೆಯಲ್ಲಿ ರೂ 20,690 ರ ಬೆಲೆಯಲ್ಲಿ ಆನ್ಲೈನ್ ಪ್ಲಾಟ್ ಫಾರ್ಮ್ ನಲ್ಲಿ ಲಭ್ಯವಿದೆ. Redmi Note 11 Pro Plus 5G ಸ್ಮಾರ್ಟ್‌ಫೋನ್ ಫ್ಯಾಂಟಮ್ ವೈಟ್, ಮಿರಾಜ್ ಬ್ಲೂ, ಸ್ಟೆಲ್ತ್ ಬ್ಲ್ಯಾಕ್ ಕಲರ್‌ಗಳ ಆಯ್ಕೆಯಲ್ಲಿ ರೂ 20,999 ರ ಬೆಲೆಯಲ್ಲಿ ಆನ್ಲೈನ್ ಪ್ಲಾಟ್ ಫಾರ್ಮ್ ನಲ್ಲಿ ಲಭ್ಯವಿದೆ.