ಟೆಲಿಕಾಂ ಮಾರುಕಟ್ಟೆಯಲ್ಲಿ ಜಿಯೋ (Jio) ಹಾಗೂ ಏರ್ಟೆಲ್ (Airtel) ನಡುವಣ ಪೈಪೋಟಿ ಮುಂದುವರೆದಿದೆ. ನಂಬರ್ ಒನ್ ಸ್ಥಾನಕ್ಕಾಗಿ ಹೋರಾಡುತ್ತಿರುವ ಏರ್ಟೆಲ್ ಬಳಕೆದಾರರಿಗೆ ಆಕರ್ಷಕ ಯೋಜನೆಗಳನ್ನು ಬಿಡುಗಡೆ ಮಾಡುತ್ತಿದೆ. ಅಲ್ಲದೆ ಹೊಸ ಬಳಕೆದಾರರನ್ನು ಸೆಳೆಯುವಲ್ಲಿ ಯಶಸ್ವಿಯಾಗುತ್ತಿದೆ. ಬೆಲೆ ಹೆಚ್ಚಳ ಮಾಡಿದ್ದರೂ ತನ್ನ ಪ್ಲಾನ್ನ ಜೊತೆಗೆ ಇತರೆ ವಿಶೇಷ ಆಫರ್ಗಳನ್ನು ನೀಡುತ್ತಿರುವ ಏರ್ಟೆಲ್ನ ಯೋಜನೆಗಳು ಹೆಚ್ಚಿನವರ ಗಮನ ಸೆಳೆಯುತ್ತಿವೆ.
ಆ ಪೈಕಿ ಹಲವು ಪ್ಲಾನ್‌ಗಳು ಅಧಿಕ ಡೈಲಿ ಡೇಟಾ ಪಡೆದಿವೆ. ಏರ್ಟೆಲ್ ಟೆಲಿಕಾಂ ಭಿನ್ನ ಶ್ರೇಣಿಯ ಪ್ರಿಪೇಯ್ಡ್ ಪ್ಲಾನ್‌ಗಳ (Prepaid Plans) ಆಯ್ಕೆ ಪಡೆದಿದೆ. ಆ ಪೈಕಿ ಡೈಲಿ ಅಧಿಕ ಡೇಟಾ ಬಯಸುವ ಗ್ರಾಹಕರಿಗೆ 699 ರೂ. ಮತ್ತು 599 ರೂ. ಯೋಜನೆಗಳು ಆಕರ್ಷಕ ಎನಿಸಿವೆ.
ಏರ್ಟೆಲ್ ಟೆಲಿಕಾಂನ 599 ರೂ. ಪ್ರಿಪೇಯ್ಡ್ ಪ್ಲಾನ್ ಒಟ್ಟು 28 ದಿನಗಳ ವ್ಯಾಲಿಡಿಟಿ ಅವಧಿಯನ್ನು ಹೊಂದಿದೆ. ಈ ಅವಧಿಯಲ್ಲಿ FUP ಲಿಮಿಟ್ ಇಲ್ಲದೇ ಅನಿಯಮಿತ ವಾಯಿಸ್ ಕರೆಗಳ ಪ್ರಯೋಜನೆ ಲಭ್ಯವಾಗಲಿದೆ. ಇದರೊಂದಿಗೆ ಬಳಕೆದಾರರು ಪ್ರತಿದಿನ 3GB ಡೇಟಾ ಪ್ರಯೋಜನ ಹಾಗೂ ಪ್ರತಿದಿನ 100 ಉಚಿತ ಎಸ್‌ಎಮ್‌ಎಸ್ ಸೌಲಭ್ಯಗಳು ಲಭ್ಯವಾಗಲಿವೆ. ಹೆಚ್ಚುವರಿಯಾಗಿ ಡಿಸ್ನಿ ಪ್ಲಸ್ ಹಾಟ್‌ಸ್ಟಾರ್ ಚಂದಾದಾರಿಕೆ ಲಭ್ಯ. ಹಾಗೂಏರ್ಟೆಲ್ Xstream ಪ್ರೀಮಿಯಂ, ವಿಂಕ್ ಮ್ಯೂಸಿಕ್, ಫಾಸ್ಟ್ಯಾಗ್ ಕ್ಯಾಶ್‌ಬ್ಯಾಕ್ ಸೇವೆಗಳು ಲಭ್ಯ.
ಇದರೊಂದಿಗೆ ಬಳಕೆದಾರರು ಪ್ರತಿದಿನ 1.5GB ಡೇಟಾ ಪ್ರಯೋಜನ ಹಾಗೂ ಪ್ರತಿದಿನ 100 ಉಚಿತ ಎಸ್‌ಎಮ್‌ಎಸ್ ಸೌಲಭ್ಯಗಳು ಲಭ್ಯವಾಗಲಿವೆ. ಹೆಚ್ಚುವರಿಯಾಗಿ ಏರ್ಟೆಲ್ Xstream ಪ್ರೀಮಿಯಂ, ವಿಂಕ್ ಮ್ಯೂಸಿಕ್, ಫಾಸ್ಟ್ಯಾಗ್ ಕ್ಯಾಶ್‌ಬ್ಯಾಕ್ ಸೇವೆಗಳು ಲಭ್ಯ. 449 ರೂ. ಪ್ರಿಪೇಯ್ಡ್ ಪ್ಲಾನ್ ಒಟ್ಟು 28 ದಿನಗಳ ವ್ಯಾಲಿಡಿಟಿ ಅವಧಿಯನ್ನು ಹೊಂದಿದೆ.
ಈ ಅವಧಿಯಲ್ಲಿ FUP ಲಿಮಿಟ್ ಇಲ್ಲದೇ ಅನಿಯಮಿತ ವಾಯಿಸ್ ಕರೆಗಳ ಪ್ರಯೋಜನೆ ಲಭ್ಯವಾಗಲಿದೆ. ಇದರೊಂದಿಗೆ ಬಳಕೆದಾರರು ಪ್ರತಿದಿನ 2.5GB ಡೇಟಾ ಪ್ರಯೋಜನ ಹಾಗೂ ಪ್ರತಿದಿನ 100 ಉಚಿತ ಎಸ್‌ಎಮ್‌ಎಸ್ ಸೌಲಭ್ಯಗಳು ಲಭ್ಯವಾಗಲಿವೆ. ಹೆಚ್ಚುವರಿಯಾಗಿ ಏರ್ಟೆಲ್ Xstream ಪ್ರೀಮಿಯಂ, ವಿಂಕ್ ಮ್ಯೂಸಿಕ್, ಫಾಸ್ಟ್ಯಾಗ್ ಕ್ಯಾಶ್‌ಬ್ಯಾಕ್ ಸೇವೆಗಳನ್ನು ನೀಡಲಾಗಿದೆ. ನಿಮ್ಮ ನಂಬರ್‌ಗೆ Airtel ನೀಡುತ್ತಿರುವ ಇತ್ತೀಚಿನ ಅತ್ಯುತ್ತಮ ಯೋಜನೆಗಳನ್ನು ಇಲ್ಲಿ My Best Plan ನೋಡಿ!