ಜಿಯೋ ತನ್ನ True 5G ಕರ್ನಾಟಕದ 20 ನಗರಗಳಲ್ಲಿ ಆರಂಭ! ನಿಮ್ಮ ಊರು ಈ ಪಟ್ಟಿಯಲ್ಲಿದ್ಯಾ?

ಜಿಯೋ ತನ್ನ True 5G ಕರ್ನಾಟಕದ 20 ನಗರಗಳಲ್ಲಿ ಆರಂಭ! ನಿಮ್ಮ ಊರು ಈ ಪಟ್ಟಿಯಲ್ಲಿದ್ಯಾ?
HIGHLIGHTS

ಭಾರತದ 184 ನಗರಗಳಲ್ಲಿ ಜಿಯೋ ಬಳಕೆದಾರರು ಈಗ ಟ್ರೂ 5ಜಿ ಸೇವೆ ಪಡೆಯುತ್ತಿದ್ದಾರೆ.

ಕರ್ನಾಟಕದ ಬಾಗಲಕೋಟೆ, ಚಿಕ್ಕಮಗಳೂರು, ಹಾಸನ, ಮಂ ಆರಂಭ.ಡ್ಯ ಮತ್ತು ತುಮಕೂರಿನಲ್ಲಿ ಜಿಯೋ ಟ್ರೂ 5ಜಿ ಸೇವೆ ಆರಂಭ.

ಬಾಗಲಕೋಟೆ, ಚಿಕ್ಕಮಗಳೂರು, ಹಾಸನ, ಮಂಡ್ಯ ಮತ್ತು ತುಮಕೂರಿನಲ್ಲಿ ಟ್ರೂ 5ಜಿ ಸೇವೆ ಆರಂಭಿಸಿದ ಏಕೈಕ ಟೆಲಿಕಾಂ ಆಪರೇಟರ್ ರಿಲಯನ್ಸ್ ಜಿಯೋ.

Jio 5G in Karnataka: ರಿಲಯನ್ಸ್ ಜಿಯೋ ಇಂದು ರಿಲಯನ್ಸ್ ಜಿಯೋ (Jio True 5G) ಒಟ್ಟಿಗೆ 50 ನಗರಗಳಲ್ಲಿ ತನ್ನ ಟ್ರೂ 5ಜಿ ಸೇವೆಗಳ ಅತಿದೊಡ್ಡ ಬಿಡುಗಡೆಯನ್ನು ಘೋಷಿಸಿದೆ. ಇದರೊಂದಿಗೆ 184 ನಗರಗಳಲ್ಲಿ ಜಿಯೋ ಬಳಕೆದಾರರು ಈಗ ಜಿಯೋ ಟ್ರೂ 5ಜಿ ಸೇವೆಗಳನ್ನು ಪಡೆಯುತ್ತಿದ್ದಾರೆ. ರಿಲಯನ್ಸ್ ಜಿಯೋ ಈ ಹೆಚ್ಚಿನ ನಗರಗಳಲ್ಲಿ 5ಜಿ ಸೇವೆಗಳನ್ನು ಪ್ರಾರಂಭಿಸಿದ ಮೊದಲ ಮತ್ತು ಏಕೈಕ ಆಪರೇಟರ್ ಆಗಿದೆ. ಇಂದಿನಿಂದ ಪ್ರಾರಂಭ ಆಗುವ ಸೇವೆಯೊಂದಿಗೆ ಯಾವುದೇ ಹೆಚ್ಚುವರಿ ವೆಚ್ಚವಿಲ್ಲದೆ 1 ಜಿಬಿಪಿಎಸ್+ ವೇಗದಲ್ಲಿ ಅನಿಯಮಿತ ಡೇಟಾವನ್ನು ಅನುಭವಿಸಲು ಈ ನಗರಗಳಲ್ಲಿನ ಜಿಯೋ ಬಳಕೆದಾರರನ್ನು ಜಿಯೋ ವೆಲ್ಕಂ ಆಫರ್ ಮೂಲಕ ಆಹ್ವಾನಿಸಲಾಗುತ್ತದೆ.

Jio True 5G ಕರ್ನಾಟಕದ 20 ನಗರಗಳಲ್ಲಿ ಆರಂಭ

ಈ ಸಂದರ್ಭದಲ್ಲಿ ಪ್ರತಿಕ್ರಿಯಿಸಿದ ಜಿಯೋ ವಕ್ತಾರರು ಕರ್ನಾಟಕದ ಬಾಗಲಕೋಟೆ, ಚಿಕ್ಕಮಗಳೂರು, ಹಾಸನ, ಮಂಡ್ಯ ಮತ್ತು ತುಮಕೂರು ಹಾಗೂ 16 ರಾಜ್ಯಗಳು ಹಾಗೂ ಕೇಂದ್ರಾಡಳಿತ ಪ್ರದೇಶಗಳಲ್ಲಿ 45 ಹೆಚ್ಚುವರಿ ನಗರಗಳಲ್ಲಿ ರಿಲಯನ್ಸ್ ಜಿಯೋ (Jio True 5G) ಸೇವೆಗಳನ್ನು ಪ್ರಾರಂಭಿಸುತ್ತಿರುವುದನ್ನು ಘೋಷಿಸಲು ನಾವು ರೋಮಾಂಚನಗೊಂಡಿದ್ದೇವೆ, ಇದರೊಂದಿಗೆ ಒಟ್ಟು ಸಂಖ್ಯೆಯನ್ನು ಭಾರತದ 184 ನಗರಗಳಿಗೆ ಕೊಂಡೊಯ್ಯುತ್ತೇವೆ. ಇದು ಭಾರತದಲ್ಲಿ ಮಾತ್ರವಲ್ಲದೆ ವಿಶ್ವದ ಎಲ್ಲೆಡೆ 5ಜಿ ಸೇವೆಗಳ ಅತಿದೊಡ್ಡ ಜಾರಿಗಳಲ್ಲಿ ‌‌ಒಂದಾಗಿದೆ.

2023ರ ಹೊಸ ವರ್ಷದಲ್ಲಿ ರಿಲಯನ್ಸ್ ಜಿಯೋ (Jio True 5G) ತಂತ್ರಜ್ಞಾನದ ರೂಪಾಂತರದ ಪ್ರಯೋಜನಗಳನ್ನು ಪ್ರತಿಯೊಬ್ಬ ಜಿಯೋ ಬಳಕೆದಾರರು ಆನಂದಿಸಬೇಕೆಂದು ನಾವು ಬಯಸುತ್ತೇವೆ. ಏಕೆಂದರೆ ನಾವು ರಾಷ್ಟ್ರದಾದ್ಯಂತ ಟ್ರೂ 5ಜಿ ಜಾರಿಯ ‌‌ವೇಗ ಮತ್ತು ತೀವ್ರತೆಯನ್ನು ಹೆಚ್ಚಿಸಿದ್ದೇವೆ. 2023ರ ಡಿಸೆಂಬರ್ ಒಳಗೆ ಇಡೀ ರಾಷ್ಟ್ರವು ಜಿಯೋ ಟ್ರೂದಿಂದ 5ಜಿ ಸೇವೆಗಳು ಆನಂದಿಸಲು ಮತ್ತು ಪ್ರಯೋಜನವನ್ನು ಪಡೆಯಲು ಸಾಧ್ಯವಾಗುತ್ತದೆ.

ಒಟ್ಟಿಗೆ 50 ನಗರಗಳಲ್ಲಿ ತನ್ನ ಟ್ರೂ 5ಜಿ ಸೇವೆ

ರಿಲಯನ್ಸ್ ಜಿಯೋ (Jio True 5G) ಪ್ರತಿಯೊಂದು ಪ್ರದೇಶವನ್ನು ಡಿಜಿಟಲೈಸ್ ಮಾಡುವ ನಮ್ಮ ಪ್ರಯತ್ನದಲ್ಲಿ ಕರ್ನಾಟಕ, ಆಂಧ್ರಪ್ರದೇಶ, ಅಸ್ಸಾಂ, ಛತ್ತೀಸ್‌ಗಢ, ಗೋವಾ, ಹರಿಯಾಣ, ಜಾರ್ಖಂಡ್, ಕೇರಳ, ಮಹಾರಾಷ್ಟ್ರ, ಒಡಿಶಾ, ಪುದುಚೇರಿ, ಪಂಜಾಬ್, ರಾಜಸ್ಥಾನ, ತಮಿಳುನಾಡು, ತೆಲಂಗಾಣ, ಉತ್ತರ ಪ್ರದೇಶ ಮತ್ತು ಪಶ್ಚಿಮ ಬಂಗಾಳ ರಾಜ್ಯ ಸರ್ಕಾರಗಳ ನಿರಂತರ ಬೆಂಬಲಕ್ಕಾಗಿ ನಾವು ಆಭಾರಿಯಾಗಿದ್ದೇವೆ ಎಂದಿದ್ದಾರೆ.

Ravi Rao

Ravi Rao

Ravi Rao is an Indian technology journalist who has been covering consumer technology news and reviews since 2016. He is a Senior Editor for Kannada at Digit.in View Full Profile

Digit.in
Logo
Digit.in
Logo