5G Phones: ಕೈಗೆಟಕುವ ಬೆಲೆಗೆ ಉತ್ತಮ ಸ್ಮಾರ್ಟ್ಫೋನ್ (5G Smartphones) ನಿಮ್ಮದೇಯಾದ ಬಜೆಟ್ ಸ್ನೇಹಿ ಸ್ಮಾರ್ಟ್ಫೋನ್ ವಿಭಾಗದಲ್ಲಿ ಹುಡುಕುತ್ತಿದ್ದೀರಾ? ದೇಶದಲ್ಲಿ ಟೆಲಿಕಾಂ ಕಂಪನಿಗಳು ತಮ್ಮದೇಯಾದ 5G ನೆಟ್ವರ್ಕ್ ಅನ್ನು ಪ್ರಾರಂಭಿಸಿದೆ. ಇದರೊಂದಿಗೆ ನಿಮಗೆ 5G ಸ್ಮಾರ್ಟ್ ಪೋನ್ ಖರೀದಿಸೋ ಪ್ಲಾನ್ ನಿಮಗಿದ್ದರೆ ಈ ಲೇಖನದಲ್ಲಿ ಒಂದನ್ನು ಆರಾಮಾಗಿ ನೀವು ಆರಿಸಿಕೊಳ್ಳಬಹುದು. ಏಕೆಂದರೆ ಇದರೊಂದಿಗೆ ಭಾರತದ ಅನೇಕ ನಗರಗಳಲ್ಲಿ ಈಗ 5G ಲಭ್ಯವಿರುವ ಕಾರಣ ಈ ಪಟ್ಟಿಯಲ್ಲಿ ನಾವು ನಿಮಗಾಗಿ ಕೇವಲ 15000 ರೂಗಳಲ್ಲಿ ಬರುವ ಅತ್ಯುತ್ತಮ 5G ಸ್ಮಾರ್ಟ್ಫೋನ್ಗಳನ್ನು ಪಟ್ಟಿ ಮಾಡಿದ್ದೇವೆ. ಒಟ್ಟಾರೆಯಾಗಿ ಸಮಯ ಈಗ 3G ಮತ್ತು 4G ಕಾಲದಿಂದ 5G ನೆಟ್ವರ್ಕ್ ಕಡೆ ವೇಗವಾಗಿ ಬದಲಾಗುತ್ತಿದೆ.
Samsung Galaxy F23 ಸ್ಮಾರ್ಟ್ಫೋನ್ 6.4-ಇಂಚಿನ ಸೂಪರ್ AMOLED ಡಿಸ್ಪ್ಲೇಯನ್ನು ಹೊಂದಿದೆ. ಈ ಫೋನ್ ಟ್ರಿಪಲ್ ಕ್ಯಾಮೆರಾ ಸೆಟಪ್ ನೊಂದಿಗೆ 50-ಮೆಗಾಪಿಕ್ಸೆಲ್ ವೈಡ್-ಆಂಗಲ್ ಕ್ಯಾಮೆರಾ, 8-ಮೆಗಾಪಿಕ್ಸೆಲ್ ಅಲ್ಟ್ರಾ-ವೈಡ್ ಕ್ಯಾಮೆರಾ ಮತ್ತು 2-ಮೆಗಾಪಿಕ್ಸೆಲ್ ಡೆಪ್ತ್ ಸೆನ್ಸಾರ್ ಸೆಲ್ಫಿ ಕ್ಯಾಮೆರಾವನ್ನು ಒಳಗೊಂಡಿದೆ. ಅಲ್ಲದೆ 5000mAh ಸಾಮರ್ಥ್ಯದ ಬ್ಯಾಟರಿಯನ್ನು ಈ ಫೋನ್ ಹೊಂದಿದೆ. ಈ ಸ್ಮಾರ್ಟ್‌ಫೋನ್ ಆಕ್ವಾ ಬ್ಲೂ ಕಲರ್‌ನ ಆಯ್ಕೆಯಲ್ಲಿದ್ದು ಇದರ ಬೆಲೆ ರೂ 14,999 ಆಗಿದ್ದು ಆನ್ಲೈನ್ ಪ್ಲಾಟ್ ಫಾರ್ಮ್ ನಲ್ಲಿ ಲಭ್ಯವಿದೆ.
Realme 9i 5G ವಾಟರ್ಡ್ರಾಪ್ ನಾಚ್ನೊಂದಿಗೆ 6.6-ಇಂಚಿನ LCD ಡಿಸ್ಪ್ಲೇಯನ್ನು ಹೊಂದಿದೆ. ಈ ಫೋನ್ ಟ್ರಿಪಲ್-ರಿಯರ್ ಕ್ಯಾಮೆರಾ ಸೆಟಪ್ ಅನ್ನು ಹೊಂದಿದೆ. ಈ ಫೋನ್ ಮುಂಭಾಗದಲ್ಲಿ 2-ಮೆಗಾಪಿಕ್ಸೆಲ್ ಪೋರ್ಟ್ರೇಟ್ ಸೆನ್ಸರ್ ಮತ್ತು 2-ಮೆಗಾಪಿಕ್ಸೆಲ್ ಮ್ಯಾಕ್ರೋ ಸೆನ್ಸರ್ ಜೊತೆಗೆ 50-ಮೆಗಾಪಿಕ್ಸೆಲ್ ಪ್ರಾಥಮಿಕ ಸೆನ್ಸರ್ ಹಾಗೂ ಸೆಲ್ಫಿಗಳಿಗಾಗಿ 8-ಮೆಗಾಪಿಕ್ಸೆಲ್ ಕ್ಯಾಮೆರಾವನ್ನು ಹೊಂದಿದೆ. USB ಟೈಪ್ C ಪೋರ್ಟ್ ಮೂಲಕ 18W ಫಾಸ್ಟ್ ಚಾರ್ಜಿಂಗ್ ಅನ್ನು ಬೆಂಬಲಿಸುವ 5000mAh ಬ್ಯಾಟರಿಯನ್ನು ಈ ಫೋನ್ ಹೊಂದಿದೆ.
Samsung Galaxy F14 5G ಸ್ಮಾರ್ಟ್ಫೋನ್ 6. 6 ಇಂಚಿನ PLS LCD ಡಿಸ್ಪ್ಲೇಯನ್ನು ಹೊಂದಿದೆ. ಈ ಫೋನ್ 50MP+2MP ಡ್ಯುಯಲ್ ಕ್ಯಾಮೆರಾ ಸೆಟಪ್ ಅನ್ನು ಒಳಗೊಂಡಿದ್ದು 6000 mAh ಲಿಥಿಯಂ-ಐಯಾನ್ ಬ್ಯಾಟರಿಯನ್ನು ಹೊಂದಿದೆ. ಈ ಸ್ಮಾರ್ಟ್‌ಫೋನ್ ಪರ್ಪಲ್, ಗೋಟ್ ಗ್ರೀನ್ ಮತ್ತು OMG ಬ್ಲಾಕ್ಕ ಕಲರ್‌ಗಳ ಆಯ್ಕೆಯಲ್ಲಿದ್ದು ಇದರ ಬೆಲೆ ರೂ 14,490 ಆಗಿದ್ದು ಆನ್ಲೈನ್ ಪ್ಲಾಟ್ ಫಾರ್ಮ್ ನಲ್ಲಿ ಲಭ್ಯವಿದೆ.
iQOO Z6 Lite 5G ಸ್ಮಾರ್ಟ್ಫೋನ್ 6.58 ಇಂಚಿನ ಪೂರ್ಣ HD+ LCD ಡಿಸ್ಪ್ಲೇಯನ್ನು ಹೊಂದಿದೆ. ಈ ಫೋನ್ 50MP ಪ್ರೈಮರಿ ಸ್ನ್ಯಾಪರ್ ಮತ್ತು 2MP ಮ್ಯಾಕ್ರೋ ಸೆನ್ಸರ್ ಅನ್ನು ಒಳಗೊಂಡಿದೆ. ಇದು ಮುಂಭಾಗದಲ್ಲಿ ವೀಡಿಯೊ ಕರೆಗಳು ಮತ್ತು ಸೆಲ್ಫಿಗಳಿಗಾಗಿ 8MP ಕ್ಯಾಮೆರಾವನ್ನು ಹೊಂದಿದೆ. ಈ ಫೋನ್ 5000mAh ಬ್ಯಾಟರಿ ಮತ್ತು 18W ಫಾಸ್ಟ್ ಚಾರ್ಜಿಂಗ್ ಅನ್ನು ಬೆಂಬಲಿಸುತ್ತದೆ.
Redmi 11 Prime 5G ಸ್ಮಾರ್ಟ್ಫೋನ್ 6.58-ಇಂಚಿನ FHD+ ಡಿಸ್ಪ್ಲೇಯನ್ನು ಹೊಂದಿದೆ. ಈ ಫೋನ್ ಡ್ಯುಯಲ್ ಕ್ಯಾಮೆರಾ ಸೆಟಪ್ ಅನ್ನು ಹೊಂದಿದ್ದು 50MP ಪ್ರೈಮರಿ ಕ್ಯಾಮೆರಾ ಮತ್ತು 2MP ಡೆಪ್ತ್ ಸೆನ್ಸಾರ್ ಅನ್ನು ಒಳಗೊಂಡಿದೆ. ಇದಲ್ಲದೆ 5000mAh ಬ್ಯಾಟರಿಯೊಂದಿಗೆ 18W ಫಾಸ್ಟ್ ಚಾರ್ಜಿಂಗ್ ಅನ್ನು ಬೆಂಬಲಿಸುತ್ತದೆ. ಈ ಸ್ಮಾರ್ಟ್‌ಫೋನ್ Meadow ಗ್ರೀನ್ ಕಲರ್‌ನ ಆಯ್ಕೆಯಲ್ಲಿದ್ದು ಇದರ ಬೆಲೆ ರೂ 13,999 ಆಗಿದ್ದು ಆನ್ಲೈನ್ ಪ್ಲಾಟ್ ಫಾರ್ಮ್ ನಲ್ಲಿ ಲಭ್ಯವಿದೆ.
Samsung Galaxy M13 5G ಸ್ಮಾರ್ಟ್ಫೋನ್ 6.5 ಇಂಚಿನ ಫುಲ್ HD+ LCD ಡಿಸ್ಪ್ಲೇಯನ್ನು ಹೊಂದಿದೆ. ಈ ಫೋನ್ 50MP+2MP ಡ್ಯುಯಲ್ ಕ್ಯಾಮೆರಾ ಸೆಟಪ್ ಅನ್ನು ಒಳಗೊಂಡಿದ್ದು 5000mAH ಲಿಥಿಯಂ-ಐಯಾನ್ ಬ್ಯಾಟರಿಯನ್ನು ಹೊಂದಿದೆ. ಈ ಸ್ಮಾರ್ಟ್‌ಫೋನ್ ಆಕ್ವಾ ಗ್ರೀನ್ ಕಲರ್‌ನ ಆಯ್ಕೆಯಲ್ಲಿದ್ದು ಇದರ ಬೆಲೆ ರೂ 13,999 ಆಗಿದ್ದು ಆನ್ಲೈನ್ ಪ್ಲಾಟ್ ಫಾರ್ಮ್ ನಲ್ಲಿ ಲಭ್ಯವಿದೆ.
POCO M4 Pro 5G ಸ್ಮಾರ್ಟ್ಫೋನ್ 6.6 ಇಂಚಿನ ಡಾಟ್ ಡಿಸ್ಪ್ಲೇಯನ್ನು ಹೊಂದಿದೆ. ಈ ಫೋನ್ ಟ್ರಿಪಲ್ ರಿಯರ್ ಕ್ಯಾಮೆರಾ ಸೆಟಪ್ ಅನ್ನು ಹೊಂದಿದ್ದು ಹಿಂದಿನ ಕ್ಯಾಮೆರಾವು 50 ಮೆಗಾಪಿಕ್ಸೆಲ್ ಪ್ರಾಥಮಿಕ ಸೆನ್ಸರ್, 8 ಮೆಗಾಪಿಕ್ಸೆಲ್ ಅಲ್ಟ್ರಾ ವೈಟ್ ಸೆನ್ಸರ್ ಮತ್ತು 5 ಮೆಗಾಪಿಕ್ಸೆಲ್ ಮ್ಯಾಕ್ರೋ ಸೆನ್ಸರ್ ಅನ್ನು ಒಳಗೊಂಡಿದೆ. ಸೆಲ್ಫಿ ಮತ್ತು ವೀಡಿಯೊ ಕರೆಗಾಗಿ ಈ ಫೋನ್ 16 ಮೆಗಾಪಿಕ್ಸೆಲ್ ಮುಂಭಾಗದ ಕ್ಯಾಮೆರಾವನ್ನು ಹೊಂದಿದೆ. ಇನ್ನು ಈ Poco ಫೋನ್ 33W ಫಾಸ್ಟ್ ಚಾರ್ಜಿಂಗ್ ಬೆಂಬಲದೊಂದಿಗೆ 5000mAh ಬ್ಯಾಟರಿಯನ್ನು ಹೊಂದಿದೆ.
Realme Narzo N55 ಸ್ಮಾರ್ಟ್ಫೋನ್ 6.72 ಇಂಚಿನ IPS LCD ಫುಲ್ HD+ ಡಿಸ್ಪ್ಲೇಯನ್ನು ಹೊಂದಿದೆ. ಇದು ಡ್ಯುಯಲ್ ರಿಯರ್ ಕ್ಯಾಮೆರಾ ಸೆಟ್ಅಪ್ ಅನ್ನು ಹೊಂದಿದೆ. ಇದರಲ್ಲಿ ಮುಖ್ಯ ಕ್ಯಾಮೆರಾ 64 ಮೆಗಾಪಿಕ್ಸೆಲ್ ಸೆನ್ಸಾರ್ ಅನ್ನು ಹೊಂದಿದೆ. ಇನ್ನು ಎರಡನೇ ಕ್ಯಾಮೆರಾ 2 ಮೆಗಾಪಿಕ್ಸೆಲ್ ಡೆಪ್ತ್ ಸೆನ್ಸಾರ್ ಅನ್ನು ಒಳಗೊಂಡಿದೆ. ಹಾಗೆಯೇ 8 ಮೆಗಾಪಿಕ್ಸೆಲ್ ಸೆನ್ಸಾರ್ ಸಾಮರ್ಥ್ಯದ ಸೆಲ್ಫಿ ಕ್ಯಾಮೆರಾವನ್ನು ಈ ಫೋನ್ ಒಳಗೊಂಡಿದೆ. ಈ ಸ್ಮಾರ್ಟ್‌ಫೋನ್ 5,000mAh ಸಾಮರ್ಥ್ಯದ ಬ್ಯಾಟರಿಯೊಂದಿಗೆ 33W ಸೂಪರ್‌ವೂಕ್ ಫಾಸ್ಟ್ ಚಾರ್ಜಿಂಗ್ ಅನ್ನು ಬೆಂಬಲಿಸುತ್ತದೆ
Lava Blaze 5G ಸ್ಮಾರ್ಟ್ಫೋನ್ 6.5-ಇಂಚಿನ HD+ IPS LCD ಡಿಸ್ಪ್ಲೇ ಹೊಂದಿದೆ. ಈ ಫೋನ್ ಟ್ರಿಪಲ್ ರಿಯರ್ ಕ್ಯಾಮೆರಾ ಸೆನ್ಸಾರ್ ಅನ್ನು ಹೊಂದಿದೆ. ಫೋನ್‌ನ ಪ್ರೈಮರಿ ಸೆನ್ಸಾರ್ 50 ಮೆಗಾಪಿಕ್ಸೆಲ್ ಆಗಿದ್ದು ಇದರ ಸೆಕೆಂಡರಿ ಸೆನ್ಸಾರ್ 2-ಮೆಗಾಪಿಕ್ಸೆಲ್ ಮ್ಯಾಕ್ರೋ ಲೆನ್ಸ್ ಮತ್ತು ಮೂರನೆಯದು VGA ಕ್ಯಾಮೆರಾ ಆಗಿದೆ. ಈ ಫೋನ್ 5000mAh ಬ್ಯಾಟರಿಯನ್ನು ಹೊಂದಿದೆ.
Realme C55 ಸ್ಮಾರ್ಟ್ಫೋನ್ 6.7 ಇಂಚಿನ ಫುಲ್ HD+ LCD ಡಿಸ್ಪ್ಲೇಯನ್ನು ಹೊಂದಿದೆ. ಈ ಫೋನ್ ಡ್ಯುಯಲ್ ರಿಯರ್ ಕ್ಯಾಮೆರಾ ಸೆಟ್ಅಪ್ ಅನ್ನು ಹೊಂದಿದೆ. ಇದರಲ್ಲಿ 64 ಮೆಗಾಪಿಕ್ಸೆಲ್ ಮುಖ್ಯ ಕ್ಯಾಮೆರಾ ಮತ್ತು 2 ಮೆಗಾಪಿಕ್ಸೆಲ್ ಡೆಪ್ತ್ ಸೆನ್ಸಾರ್ ಆಯ್ಕೆನ್ನು ನೀಡಲಾಗಿದೆ. ಹಾಗೆಯೇ 8 ಮೆಗಾಪಿಕ್ಸೆಲ್ ಸೆನ್ಸಾರ್ ಸಾಮರ್ಥ್ಯದ ಸೆಲ್ಫಿ ಕ್ಯಾಮೆರಾವನ್ನು ಈ ಫೋನ್ ಒಳಗೊಂಡಿದೆ. ಈ ಫೋನ್ 5,000mAh ಸಾಮರ್ಥ್ಯದ ಬ್ಯಾಟರಿಯೊಂದಿಗೆ 33W ಫಾಸ್ಟ್ ಚಾರ್ಜಿಂಗ್ ಅನ್ನು ಬೆಂಬಲಿಸುತ್ತದೆ.
Xiaomi Redmi 10 ಫೋನ್ 6.70-ಇಂಚಿನ ಟಚ್‌ಸ್ಕ್ರೀನ್ ಡಿಸ್ಪ್ಲೇಯನ್ನು ಹೊಂದಿದೆ. ಈ ಫೊನ್ ಹಿಂಭಾಗದಲ್ಲಿ 50-ಮೆಗಾಪಿಕ್ಸೆಲ್ ಪ್ರಾಥಮಿಕ ಕ್ಯಾಮೆರಾ ಮತ್ತು 2-ಮೆಗಾಪಿಕ್ಸೆಲ್ ಕ್ಯಾಮೆರಾವನ್ನು ಒಳಗೊಂಡ ಡ್ಯುಯಲ್ ಕ್ಯಾಮೆರಾ ಸೆಟಪ್ ಅನ್ನು ಹೊಂದಿದೆ. ಬ್ಯಾಕ್ ಕ್ಯಾಮರಾ ಸೆಟಪ್ ಆಟೋಫೋಕಸ್ ಅನ್ನು ಹೊಂದಿದ್ದು ಸೆಲ್ಫಿಗಳಿಗಾಗಿ ಫ್ರಂಟ್ ಕ್ಯಾಮರಾ ಸೆಟಪ್ ಅನ್ನು ಈ ಫೋನ್ ಒಳಗೊಂಡಿದೆ. ಈ ಫೋನ್ Li-Po 6000mAH ಬ್ಯಾಟರಿಯಿಂದ ಚಾಲಿತವಾಗಿದ್ದು ಟೈಪ್-ಸಿ ಚಾರ್ಜಿಂಗ್ ಪೋರ್ಟ್‌ನಲ್ಲಿ 18W ಫಾಸ್ಟ್ ಚಾರ್ಜಿಂಗ್ ಅನ್ನು ಬೆಂಬಲಿಸುತ್ತದೆ.
Infinix Note 12i ಸ್ಮಾರ್ಟ್‌ಫೋ6 .5-ಇಂಚಿನ AMOLED ಡಿಸ್ಪ್ಲೇಯನ್ನು ಹೊಂದಿದೆ. ಈ ಫೋನ್ 50-ಮೆಗಾಪಿಕ್ಸೆಲ್ ಮುಖ್ಯ ಕ್ಯಾಮೆರಾ ಮತ್ತು 2-ಮೆಗಾಪಿಕ್ಸೆಲ್ ಡೆಪ್ತ್ ಸೆನ್ಸರ್ ಅನ್ನು ಹೊಂದಿರುವ ಕ್ಯಾಮೆರಾ ಸೆಟಪ್ ಅನ್ನು ಒಳಗೊಂಡಿದೆ. ಅಲ್ಲದೆ ಇದು ಫ್ರಂಟ್ 8-ಮೆಗಾಪಿಕ್ಸೆಲ್ ಕ್ಯಾಮೆರಾವನ್ನು ಹೊಂದಿದೆ. ಈ ಫೋನ್ 5000mAh ಬ್ಯಾಟರಿಯನ್ನು ಹೊಂದಿದ್ದು 33W ಫಾಸ್ಟ್ ಚಾರ್ಜಿಂಗ್ ಅನ್ನು ಬೆಂಬಲಿಸುತ್ತದೆ.
Moto G13 ಸ್ಮಾರ್ಟ್ಫೋನ್ 6.5 ಇಂಚಿನ HD+ LCD ಡಿಸ್ಪ್ಲೇಯನ್ನು ಹೊಂದಿದೆ. ಈ ಸ್ಮಾರ್ಟ್‌ಫೋನ್ ಟ್ರಿಪಲ್ ರಿಯರ್ ಕ್ಯಾಮೆರಾ ಸೆಟ್ಅಪ್ ಅನ್ನು ಹೊಂದಿದೆ. ಇದರಲ್ಲಿ ಮುಖ್ಯ ಕ್ಯಾಮೆರಾ 50 ಮೆಗಾಪಿಕ್ಸೆಲ್ ಸೆನ್ಸಾರ್, ಎರಡನೇ ಕ್ಯಾಮೆರಾ 5 ಮೆಗಾಪಿಕ್ಸೆಲ್ ಅಲ್ಟ್ರಾ-ವೈಡ್ ಲೆನ್ಸ್ ಮತ್ತು ಮೂರನೇ ಕ್ಯಾಮೆರಾ 2 ಮೆಗಾಪಿಕ್ಸೆಲ್ ಡೆಪ್ತ್ ಸೆನ್ಸಾರ್ ಅನ್ನು ಒಳಗೊಂಡಿದೆ. ಹಾಗೆಯೇ 8MP ಸೆಲ್ಫಿ ಕ್ಯಾಮೆರಾವನ್ನು ಹೊಂದಿದೆ. Moto G13 ಸ್ಮಾರ್ಟ್‌ಫೋನ್ 5000mAh ಸಾಮರ್ಥ್ಯದ ಬ್ಯಾಟರಿಯನ್ನು ಒಳಗೊಂಡಿದ್ದು 20W ಫಾಸ್ಟ್ ಚಾರ್ಜಿಂಗ್ ಅನ್ನು ಬೆಂಬಲಿಸುತ್ತದೆ.
Infinix Hot 30i ಸ್ಮಾರ್ಟ್ಫೋನ್ 6.6 ಇಂಚಿನ IPS LCD ಡಿಸ್ಪ್ಲೇಯನ್ನು ಹೊಂದಿದೆ. ಈ ಫೋನ್ ಡ್ಯುಯಲ್ ರಿಯರ್ ಕ್ಯಾಮೆರಾ ಸೆಟ್ಅಪ್ ಅನ್ನು ಹೊಂದಿದೆ. ಇದರಲ್ಲಿ ಮುಖ್ಯ ಕ್ಯಾಮೆರಾ 50 ಮೆಗಾಪಿಕ್ಸೆಲ್ ಸೆನ್ಸಾರ್ ಹೊಂದಿದ್ದು ಎರಡನೇ ಕ್ಯಾಮೆರಾ 2 ಮೆಗಾಪಿಕ್ಸೆಲ್ ಸೆನ್ಸಾರ್ ಅನ್ನು ಒಳಗೊಂಡಿದೆ. ಇದಲ್ಲದೆ 5 ಮೆಗಾಪಿಕ್ಸೆಲ್ ಸೆನ್ಸಾರ್ ಸಾಮರ್ಥ್ಯದ ಸೆಲ್ಫಿ ಕ್ಯಾಮೆರಾವನ್ನು ಈ ಫೋನ್ ಒಳಗೊಂಡಿದೆ. ಈ ಫೋನ್ 6,000mAh ಸಾಮರ್ಥ್ಯದ ಬ್ಯಾಟರಿಯೊಂದಿಗೆ 18W ಫಾಸ್ಟ್ ಚಾರ್ಜಿಂಗ್ ಅನ್ನು ಬೆಂಬಲಿಸುತ್ತದೆ.
Infinix ನ ಈ ಫೋನ್ ರೂ.12999 ಕ್ಕೆ ಮಾರಾಟವಾಗಿದೆ. ಸ್ಮಾರ್ಟ್‌ಫೋನ್ ಮೀಡಿಯಾ ಟೆಕ್ ಡೈಮೆನ್ಸಿಟಿ 810 5G ನಿಂದ ಚಾಲಿತವಾಗಿದೆ ಮತ್ತು 6GB RAM ಮತ್ತು 64GB ಸಂಗ್ರಹಣೆಯೊಂದಿಗೆ ಜೋಡಿಸಲಾಗಿದೆ. ಸ್ಮಾರ್ಟ್ಫೋನ್ 50 MP + 2 MP ಡೆಪ್ತ್ ಲೆನ್ಸ್ + AI ಲೆನ್ಸ್ ಅನ್ನು ಪಡೆಯುತ್ತಿದೆ ಮತ್ತು ಇದು 6.7 ಇಂಚಿನ ಪೂರ್ಣ HD + AMOLED ಡಿಸ್ಪ್ಲೇ ಮತ್ತು 5000 mAh ಬ್ಯಾಟರಿಯೊಂದಿಗೆ ಬರುತ್ತದೆ.
ಒಪ್ಪೋ ಕಂಪನಿಯ ಈ OPPO A74 5G ಅನ್ನು ರೂ.15490 ಕ್ಕೆ ಖರೀದಿಸಬಹುದು. ಸ್ಮಾರ್ಟ್ಫೋನ್ Qualcomm Snapdragon 480 5G ನಿಂದ ಚಾಲಿತವಾಗಿದೆ. ಮತ್ತು 6GB RAM ಮತ್ತು 128GB ಸ್ಟೋರೇಜ್ ಅನ್ನು ಪ್ಯಾಕ್ ಮಾಡುತ್ತದೆ. ಫೋನ್ 48MP + 2MP ಮ್ಯಾಕ್ರೋ + 2MP ಡೆಪ್ತ್ ಲೆನ್ಸ್‌ನೊಂದಿಗೆ ಬರುತ್ತದೆ ಮತ್ತು ಸಾಧನವು 6.49 ಇಂಚಿನ FHD+ ಪಂಚ್-ಹೋಲ್ ಡಿಸ್ಪ್ಲೇಯನ್ನು ಹೊಂದಿದೆ ಮತ್ತು 5000mAh ಬ್ಯಾಟರಿಯಿಂದ ಬೆಂಬಲಿತವಾಗಿದೆ.
MOTOROLA ನ ಈ 5G ಫೋನ್ ರೂ.14999 ಕ್ಕೆ ಲಭ್ಯವಿದೆ. ಸ್ಮಾರ್ಟ್‌ಫೋನ್ ಕ್ವಾಲ್ಕಾಮ್ ಸ್ನಾಪ್‌ಡ್ರಾಗನ್ 695 5G ನಿಂದ ಚಾಲಿತವಾಗಿದೆ ಮತ್ತು 6GB RAM ಮತ್ತು 128GB ಸಂಗ್ರಹಣೆಯೊಂದಿಗೆ ಜೋಡಿಸಲಾಗಿದೆ. 50MP + 8MP + 2MP ನ ಕ್ಯಾಮೆರಾ ಸೆಟಪ್ ಫೋನ್‌ನಲ್ಲಿ ಲಭ್ಯವಿದೆ. 6.55 ಇಂಚಿನ ಪೂರ್ಣ HD+ ಡಿಸ್ಪ್ಲೇಯನ್ನು ತೋರಿಸುತ್ತದೆ ಮತ್ತು 5000mAh ಬ್ಯಾಟರಿಯಿಂದ ಬೆಂಬಲಿತವಾಗಿದೆ.